"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
ಅಬೂ ಅಬ್ದುರ್ರಹ್ಮಾನ್ ಅಬ್ದುಲ್ಲಾ ಇಬ್ನ್ ಉಮರ್ ಇಬ್ನುಲ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ:
"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."
«بُنِيَ الإِسْلَامُ عَلَى خَمْسٍ: شَهَادَةِ أَنْ لَا إلَهَ إلَّا اللَّهُ وَأَنَّ مُحَمَّدًا عَبْدُهُ وَرَسُولُهُ، وَإِقَامِ الصَّلَاةِ، وَإِيتَاءِ الزَّكَاةِ، وَحَجِّ الْبَيْتِ، وَصَوْمِ رَمَضَانَ».
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಸ್ಲಾಂ ಧರ್ಮವನ್ನು ಐದು ಸ್ತಂಭಗಳಿಂದ ಎತ್ತಿಹಿಡಿಯಲಾದ ಬಲಿಷ್ಠ ಕಟ್ಟಡಕ್ಕೆ ಹೋಲಿಸಿದ್ದಾರೆ. ಇಸ್ಲಾಂ ಧರ್ಮದ ಇತರ ಬೋಧನೆಗಳು ಈ ಕಟ್ಟಡದ ಪರಿಪೂರ್ಣತೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಸ್ತಂಭಗಳಲ್ಲಿ ಮೊದಲನೆಯದು: ಎರಡು ಸಾಕ್ಷ್ಯವಚನಗಳು. ಅಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ಇವೆರಡು ಒಂದೇ ಸ್ತಂಭವಾಗಿದೆ. ಏಕೆಂದರೆ ಅವುಗಳನ್ನು ಪರಸ್ಪರ ಬೇರ್ಪಡಿಸಲಾಗುವುದಿಲ್ಲ. ದಾಸನು ಅಲ್ಲಾಹನ ಏಕತೆಯನ್ನು ಮತ್ತು ಆರಾಧನೆಗೆ ಅವನು ಮಾತ್ರ ಅರ್ಹನೆಂದು ಒಪ್ಪಿಕೊಂಡು, ಅದರ ಪ್ರಕಾರ ಕರ್ಮಗಳನ್ನು ಮಾಡುವ, ಮತ್ತು ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರ ಪ್ರವಾದಿತ್ವದಲ್ಲಿ ವಿಶ್ವಾಸವಿಟ್ಟು ಅವರನ್ನು ಅನುಸರಿಸುವ ದೃಢನಿಶ್ಚಯದೊಂದಿಗೆ ಈ ಎರಡು ವಚನಗಳನ್ನು ಉಚ್ಛರಿಸುತ್ತಾನೆ. ಎರಡನೆಯ ಸ್ತಂಭ: ನಮಾಝ್ ಸಂಸ್ಥಾಪಿಸುವುದು. ಅಂದರೆ ದಿನ-ರಾತ್ರಿಗಳಲ್ಲಿ ನಿರ್ವಹಿಸಲಾಗುವ ಫಜ್ರ್, ಝುಹರ್, ಅಸರ್, ಮಗ್ರಿಬ್ ಮತ್ತು ಇಶಾ ಎಂಬ ಐದು ಕಡ್ಡಾಯ ನಮಾಝ್‌ಗಳನ್ನು ಅವುಗಳ ಷರತ್ತುಗಳು, ಸ್ತಂಭಗಳು ಮತ್ತು ಕಡ್ಡಾಯಗಳನ್ನು ಪಾಲಿಸಿ ನಿರ್ವಹಿಸುವುದು. ಮೂರನೆಯ ಸ್ತಂಭ: ಕಡ್ಡಾಯ ಝಕಾತ್ (ದಾನ) ನೀಡುವುದು. ಇದೊಂದು ಆರ್ಥಿಕ ಆರಾಧನೆಯಾಗಿದ್ದು, ಧರ್ಮಶಾಸ್ತ್ರದಲ್ಲಿ ನಿರ್ದೇಶಿಸಿದಂತೆ ಒಂದು ನಿಗದಿತ ಪ್ರಮಾಣವನ್ನು ತಲುಪಿದ ಸಂಪತ್ತಿನ ಒಂದು ಭಾಗವನ್ನು ಕಡ್ಡಾಯವಾಗಿ ಅದರ ಅರ್ಹ ಫಲಾನುಭವಿಗಳಿಗೆ ನೀಡುವುದು. ನಾಲ್ಕನೆಯ ಸ್ತಂಭ: ಹಜ್ಜ್ ನಿರ್ವಹಿಸುವುದು. ಅಂದರೆ, ಅಲ್ಲಾಹನ ಆರಾಧನೆ ಸಲ್ಲಿಸುವುದಕ್ಕಾಗಿ ಹಜ್ಜ್ ಕರ್ಮಗಳನ್ನು ನಿರ್ವಹಿಸಲು ಮಕ್ಕಾಗೆ ತೆರಳುವುದು. ಐದನೆಯ ಸ್ತಂಭ: ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು. ಅಂದರೆ, ಅಲ್ಲಾಹನಿಗೆ ಆರಾಧನೆ ಸಲ್ಲಿಸುವ ಸಂಕಲ್ಪದೊಂದಿಗೆ, ಪ್ರಭಾತದಿಂದ ಸೂರ್ಯಾಸ್ತದ ತನಕ ಆಹಾರ, ಪಾನೀಯ ಮುಂತಾದ ಉಪವಾಸವನ್ನು ಅಸಿಂಧುಗೊಳಿಸುವ ವಸ್ತುಗಳಿಂದ ದೂರವಿರುವುದು.
ಎರಡು ಸಾಕ್ಷ್ಯವಚನಗಳು ಅವಿಭಾಜ್ಯವಾಗಿವೆ. ಒಂದನ್ನು ಹೊರತುಪಡಿಸಿ ಇನ್ನೊಂದನ್ನು ಮಾತ್ರ ಸ್ವೀಕರಿಸಿದರೆ ಅದು ಸಿಂಧುವಾಗುವುದಿಲ್ಲ. ಆದ್ದರಿಂದಲೇ ಅವುಗಳನ್ನು ಒಂದೇ ಸ್ತಂಭವಾಗಿ ಪರಿಗಣಿಸಲಾಗಿದೆ.
ಎರಡು ಸಾಕ್ಷ್ಯವಚನಗಳು ಧರ್ಮದ ಅಡಿಪಾಯವಾಗಿವೆ. ಅವುಗಳ ಅಭಾವದಲ್ಲಿ ಯಾವುದೇ ಮಾತು-ಕರ್ಮಗಳನ್ನು ಸ್ವೀಕಾರವಾಗುವುದಿಲ್ಲ.
ಸಹೀಹುಲ್ ಬುಖಾರಿ. (1/ 11) (8).
ಸಹೀಹ್ ಮುಸ್ಲಿಮ್. (1/ 45) (16).
ಇನ್ನಷ್ಟು (8)
و(1/ 88) (82).
فتح الباري لابن رجب (1/ 22).
جامع العلوم والحكم (1/147).
شرح الأربعين لابن العطّار (ص 62).
شرح الأربعين النووية لعبد الكريم الخضير (ص 87).
فتح القوي المتين في شرح الأربعين للعباد (ص 29).
شرح الأربعين النووية لصالح آل الشيخ (ص 91 - 95).
التحفة الربانية لإسماعيل الأنصاري (ص 12).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
16 ಗ್ರಂಥಗಳುಇನ್ನಷ್ಟು (16)
- الصلاة التي علمها النبي ﷺ الصحابة رضي الله عنهمالصلاة التي علمها النبي ﷺ الصحابة رضي الله عنهم«بُنِيَ الْإِسْلَامُ عَلَى خَمْسٍ...»،
- الصلاة التي علمها النبي ﷺ الصحابة رضي الله عنهم«بُنِيَ الْإِسْلَامُ عَلَى خَمْسٍ...»،
- خطب تعظيم قدر الصلاة"بُنِيَ الإِسْلاَمُ عَلَى خَمْسٍ: شَهَادَةِ أَنْ لاَ إِلَهَ إِلَّا اللَّهُ وَأَنَّ مُحَمَّدًا رَسُولُ اللَّهِ، وَإِقَامِ الصَّلاَةِ، وَإِيتَاءِ الزَّكَاةِ، وَالحَجِّ، وَصَوْمِ رَمَضَانَ"
- رسالتان موجزتان في الزكاة والصيامفي بحوث هامة حول الزكاة«بُنِيَ الإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وَأَنَّ مُحَمَّدًا رَسُولُ اللهِ، وَإِقَامِ الصَّلَاةِ، وَإِيتَاءِ الزَّكَاةِ، وَصَوْمِ رَمَضَانَ، وَحَجِّ البَيْتِ»[1]،
- رسالتان موجزتان في الزكاة والصيامفي فضل صيام رمضان وقيامه «بُنِيَ الإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وَأَنَّ مُحَمَّدًا رَسُولُ اللهِ، وَإِقَامِ الصَّلَاةِ، وَإِيتَاءِ الزَّكَاةِ، وَصَوْمِ رَمَضَانَ، وَحَجِّ البَيْتِ»[6].
- فصول في الصيام والتراويح والزكاة«بُنِيَ الْإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وَأَنَّ مُحَمَّدًا عَبْدُهُ وَرَسُولُهُ، وَإِقَامِ الصَّلَاةِ، وَإِيتَاءِ الزَّكَاةِ، وَحَجِّ الْبَيْتِ، وَصَوْمِ رَمَضَانَ»
- قاموس الكبائر موسوعة الكبائر - المجموعة الأولى«بُنِيَ الإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللَّهُ وَأَنَّ مُحَمَّدًا رَسُولُ اللَّهِ، وَإِقَامِ الصَّلَاةِ، وَإِيتَاءِ الزَّكَاةِ، وَالحَجِّ، وَصَوْمِ رَمَضَانَ» [174].
- قاموس الكبائر«بُنِيَ الإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللَّهُ وَأَنَّ مُحَمَّدًا رَسُولُ اللَّهِ، وَإِقَامِ الصَّلَاةِ، وَإِيتَاءِ الزَّكَاةِ، وَالحَجِّ، وَصَوْمِ رَمَضَانَ» [174].
- قاموس الكبائرموسوعة الكبائر - المجموعة الرابعة«بُنِيَ الْإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللَّهُ وَأَنَّ مُحَمَّدًا رَسُولُ اللَّهِ، وَإِقَامِ الصَّلَاةِ، وَإِيتَاءِ الزَّكَاةِ، وَالْحَجِّ، وَصَوْمِ رَمَضَانَ»[57].
- ما لا يسع المسلم جهله«بُنِيَ الإسْلَامُ عَلَى خَمْسٍ: شَهَادَةِ أنْ لَا إلَهَ إلَّا اللَّهُ وأنَّ مُحَمَّدًا رَسُولُ اللَّهِ، وَإقَامِ الصَّلَاةِ، وَإيتَاءِ الزَّكَاةِ، وَحَجِّ البَيْتِ، وصَوْمِ رَمَضَانَ»[1].
- مجموعة زاد الحديث (1)الحديث 1«بني الإسلام على خمس...»
- محاضرات تعظيم قدر الصلاةمحاضرات في تعظيم قدر الصلاة"بُنِيَ الإِسْلاَمُ عَلَى خَمْسٍ: شَهَادَةِ أَنْ لاَ إِلَهَ إِلَّا اللَّهُ وَأَنَّ مُحَمَّدًا رَسُولُ اللَّهِ، وَإِقَامِ الصَّلاَةِ، وَإِيتَاءِ الزَّكَاةِ، وَالحَجِّ، وَصَوْمِ رَمَضَانَ " [21]
- مشروع منهاج زادكزادك 2 طالب نهائي«بُنِيَ الْإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وَأَنَّ مُحَمَّدًا عَبْدُهُ وَرَسُولُهُ، وَإِقَامِ الصَّلَاةِ، وَإِيتَاءِ الزَّكَاةِ، وَحَجِّ الْبَيْتِ، وَصَوْمِ رَمَضَانَ»
- منهج إعداد الدعاةالمفردة الرابعة -أركان الإسلام"بني الإسلام على خمس: شهادة أن لا إله إلا الله وأن محمدًا رسول الله..."
- نبراس طالب (1)1«بُنِيَ الإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وأَنَّ مُحَمَّدًا رَسُولُ اللهِ، وَإِقَامِ الصَّلاَةِ، وَإِيتَاءِ الزَّكَاةِ، وَالحَجِّ، وَصَوْمِ رَمَضَانَ»
- نبراس طالب (2)نبراس طالب (2) «بُنِيَ الْإِسْلَامُ عَلَى خَمْسٍ: شَهَادَةِ أَنْ لَا إِلَهَ إِلَّا اللهُ وَأَنَّ مُحَمَّدًا رَسُولُ اللهِ، وَإِقَامِ الصَّلَاةِ، وإيتاءِ الزكاةِ، والحجِّ، وصوْمِ رمضانَ»