عربي - Arabic English Qafár af - Afar Afrikaans - Afrikanns Akan Shqip - Albanian አማርኛ - Amharic Հայերեն - Armenian অসমীয়া - Assamese Azərbaycanca - Azerbaijani Bamanankan - Bambara Bassa Bemba বাংলা - Bengali Bosanski - Bosnian Български - Bulgarian မြန်မာဘာသာ - Burmese Bisaya - Cebuano Cham Нохчий - Chechen chiCheŵa - Chewa 中文 - Chinese Адыгэбзэ - Circassian Hrvatski - Croatian Česky - Czech Dagbani Dansk - Danish فارسی دری - Dari Dendi ދިވެހި ބަސް - Dhivehi Nederlands - Dutch إستوني - Estonian Suomi - Finnish Français - French Fulfulde - Fula ქართული - Georgian Deutsch - German Ελληνικά - Greek ગુજરાતી - Gujrati Kreyòl ayisyen - Haitian Creole Hausa हिन्दी - Hindi Magyar - Hungarian Igbo Indonesia - Indonesian Italiano - Italian 日本語 - Japanese Jóola - Jola ಕನ್ನಡ - Kannada Қазақша - Kazakh ភាសាខ្មែរ - Khmer Kikuyu Ikinyarwanda - Kinyarwanda Ikirundi - Kirundi 한국어 - Korean كوردی سۆرانی - kurdish كوردي kurmancî - Kurmanji Kyrgyz ລາວ - Lao latviešu - Latvian Lingala lietuvių - Lithuanian Luganda Македонски - Macedonian Maguindanaon Malagasy - Malagasy Bahasa Melayu - Malay മലയാളം - Malayalam Mandinka मराठी - Marathi Mõõré - Moore नेपाली - Nepali أنكو - NKo Norwegian ଓଡ଼ିଆ - Odia oromoo - Oromo پښتو - Pashto فارسی - Persian Polski - Polish Portuguese ਪੰਜਾਬੀ - Punjabi Română - Romanian Русский - Russian Српски - Serbian Shona සිංහල - Sinhala Slovenščina - Slovenian Soomaaliga - Somali Soninke Sesotho - Sotho Español - Spanish Kiswahili - Swahili Svenska - Swedish Tagalog Тоҷикӣ - Tajik தமிழ் - Tamil తెలుగు - Telugu ไทย - Thai ትግረኛ - Tigrinya Türkçe - Turkish Ukrainian اردو - Urdu ئۇيغۇرچە - Uyghur Ўзбек - Uzbek Việt Nam - Vietnamese Wolof Yao Yorùbá - Yoruba Zarma زولو - Zulu
839 ಹದೀಸ್‌ಗಳು
ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ
ವರ್ಗಗಳು
ಹದೀಸ್‌ನ ದರ್ಜೆ
ವರದಿಯಾದ ಗ್ರಂಥ
ವರದಿಗಾರ
ಎಲ್ಲಾ ವರದಿಗಾರರನ್ನು ತೋರಿಸಿ (26)
"ಮೀಸೆಯನ್ನು ಕತ್ತರಿಸುವುದು, ಉಗುರುಗಳನ್ನು ಕತ್ತರಿಸುವುದು, ಕಂಕುಳಿನ ಕೂದಲನ್ನು ಕೀಳುವುದು, ಮತ್ತು ಗುಪ್ತಾಂಗದ (ಸುತ್ತಲಿನ) ಕೂದಲನ್ನು ಬೋಳಿಸುವುದು – ಇವುಗಳಲ್ಲಿ ನಾವು ನಲವತ್ತು ರಾತ್ರಿಗಳಿಗಿಂತ ಹೆಚ್ಚು ಕಾಲ (ಅವುಗಳನ್ನು ಹಾಗೆಯೇ) ಬಿಡಬಾರದೆಂದು ನಮಗೆ ಸಮಯವನ್ನು ನಿಗದಿಪಡಿಸಲಾಗಿದೆ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯವನ್ನು ಪ್ರವೇಶಿಸುವಾಗ,ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್ ಖುಬುಸಿ ವಲ್ ಖಬಾಇಸ್ (ಓ ಅಲ್ಲಾಹ್, ಗಂಡು ಶೈತಾನರಿಂದ ಮತ್ತು ಹೆಣ್ಣು ಶೈತಾನರಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಿದ್ದರು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಿಮ್ಮಲ್ಲಿ ಯಾರಾದರೂ ಜುಮಾ ನಮಾಝ್‌ಗೆ ಬಂದರೆ ಸ್ನಾನ ಮಾಡಿ ಬರಲಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಾನು ಅತ್ಯಧಿಕ ಮದಿ (ಸ್ಖಲನಪೂರ್ವ ದ್ರವ) ಸ್ರವಿಸುವ ವ್ಯಕ್ತಿಯಾಗಿದ್ದೆ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಗಳಿಗಿರುವ ಸ್ಥಾನಮಾನದಿಂದ ನಾನು ಅವರಲ್ಲಿ ಅದರ ಬಗ್ಗೆ ಕೇಳಲು ಸಂಕೋಚಪಡುತ್ತಿದ್ದೆ. ಆದ್ದರಿಂದ, ನಾನು ಮಿಕ್ದಾದ್ ಬಿನ್ ಅಸ್ವದ್ ರಿಗೆ ಆಜ್ಞಾಪಿಸಿದೆ. ಅವರು (ಅದರ ಬಗ್ಗೆ) ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವರು ತಮ್ಮ ಜನನಾಂಗವನ್ನು ತೊಳೆದು ವುದೂ (ಅಂಗಸ್ನಾನ) ನಿರ್ವಹಿಸಲಿ."
ಬುಖಾರಿಯಲ್ಲಿರುವ ವರದಿಯಲ್ಲಿ ಹೀಗಿದೆ: "ಅವರು ಉತ್ತರಿಸಿದರು: ನೀವು ವುದೂ ನಿರ್ವಹಿಸಿರಿ ಮತ್ತು ನಿಮ್ಮ ಜನನಾಂಗವನ್ನು ತೊಳೆಯಿರಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ. ನಮಾಝ್ ಬೆಳಕಾಗಿದೆ, ದಾನವು ಪುರಾವೆಯಾಗಿದೆ, ತಾಳ್ಮೆಯು ಪ್ರಕಾಶವಾಗಿದೆ, ಮತ್ತು ಕುರ್‌ಆನ್ ನಿನ್ನ ಪರವಾಗಿ ಅಥವಾ ನಿನಗೆ ವಿರುದ್ಧವಾಗಿರುವ ಪುರಾವೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಬೆಳಗಾಗುತ್ತಲೇ ತನ್ನ ಆತ್ಮವನ್ನು ಮಾರಾಟ ಮಾಡುತ್ತಾನೆ. ನಂತರ ಅವನು ಅದನ್ನು ಸ್ವತಂತ್ರಗೊಳಿಸುತ್ತಾನೆ ಅಥವಾ ನಾಶಗೊಳಿಸುತ್ತಾನೆ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ನಾಯಿ ನಿಮ್ಮಲ್ಲೊಬ್ಬರ ಪಾತ್ರೆಯಲ್ಲಿ ಕುಡಿದರೆ, ಅವನು ಅದನ್ನು ಏಳು ಬಾರಿ ತೊಳೆಯಬೇಕಾಗಿದೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್ಯೆಯಲ್ಲಿ ಮಾಡಲಿ. ನಿಮ್ಮಲ್ಲೊಬ್ಬರು ನಿದ್ದೆಯಿಂದ ಎದ್ದರೆ ಕೈಯನ್ನು ನೀರಿನ ಪಾತ್ರೆಯೊಳಗೆ ಮುಳುಗಿಸುವ ಮೊದಲು ಅದನ್ನು ತೊಳೆಯಲಿ. ಏಕೆಂದರೆ ರಾತ್ರಿ ತನ್ನ ಕೈ ಎಲ್ಲೆಲ್ಲಾ ಇತ್ತೆಂದು ಯಾರಿಗೂ ತಿಳಿದಿರುವುದಿಲ್ಲ."
ಮುಸ್ಲಿಂರ ವರದಿಯಲ್ಲಿ ಹೀಗಿದೆ: "ನಿಮ್ಮಲ್ಲೊಬ್ಬರು ನಿದ್ದೆಯಿಂದ ಎದ್ದರೆ ತನ್ನ ಕೈಯನ್ನು ನೀರಿನ ಪಾತ್ರೆಯೊಳಗೆ ಮುಳುಗಿಸುವ ಮೊದಲು ಮೂರು ಬಾರಿ ತೊಳೆಯಲಿ. ಏಕೆಂದರೆ ರಾತ್ರಿ ತನ್ನ ಕೈ ಎಲ್ಲೆಲ್ಲಾ ಇತ್ತೆಂದು ಅವರಿಗೆ ತಿಳಿದಿರುವುದಿಲ್ಲ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ಜನಾಬತ್' (ದೊಡ್ಡ ಅಶುದ್ಧಿ) ಸ್ನಾನ ಮಾಡಲು ಒಂದು 'ಸಾಅ್' ನೀರನ್ನು, ಮತ್ತು ವುಧೂ ಮಾಡಲು ಒಂದು 'ಮುದ್ದ್' ನೀರನ್ನು ಬಳಸುತ್ತಿದ್ದರು."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.