عربي - Arabic English Qafár af - Afar Afrikaans - Afrikanns Akan Shqip - Albanian አማርኛ - Amharic Հայերեն - Armenian অসমীয়া - Assamese Azərbaycanca - Azerbaijani Bamanankan - Bambara Bassa Bemba বাংলা - Bengali Bosanski - Bosnian Български - Bulgarian မြန်မာဘာသာ - Burmese Bisaya - Cebuano Cham Нохчий - Chechen chiCheŵa - Chewa 中文 - Chinese Адыгэбзэ - Circassian Hrvatski - Croatian Česky - Czech Dagbani Dansk - Danish فارسی دری - Dari Dendi ދިވެހި ބަސް - Dhivehi Nederlands - Dutch إستوني - Estonian Suomi - Finnish Français - French Fulfulde - Fula ქართული - Georgian Deutsch - German Ελληνικά - Greek ગુજરાતી - Gujrati Kreyòl ayisyen - Haitian Creole Hausa हिन्दी - Hindi Magyar - Hungarian Igbo Indonesia - Indonesian Italiano - Italian 日本語 - Japanese Jóola - Jola ಕನ್ನಡ - Kannada Қазақша - Kazakh ភាសាខ្មែរ - Khmer Kikuyu Ikinyarwanda - Kinyarwanda Ikirundi - Kirundi 한국어 - Korean كوردی سۆرانی - kurdish كوردي kurmancî - Kurmanji Kyrgyz ລາວ - Lao latviešu - Latvian Lingala lietuvių - Lithuanian Luganda Македонски - Macedonian Maguindanaon Malagasy - Malagasy Bahasa Melayu - Malay മലയാളം - Malayalam Mandinka मराठी - Marathi Mõõré - Moore नेपाली - Nepali أنكو - NKo Norwegian ଓଡ଼ିଆ - Odia oromoo - Oromo پښتو - Pashto فارسی - Persian Polski - Polish Portuguese ਪੰਜਾਬੀ - Punjabi Română - Romanian Русский - Russian Српски - Serbian Shona සිංහල - Sinhala Slovenščina - Slovenian Soomaaliga - Somali Soninke Sesotho - Sotho Español - Spanish Kiswahili - Swahili Svenska - Swedish Tagalog Тоҷикӣ - Tajik தமிழ் - Tamil తెలుగు - Telugu ไทย - Thai ትግረኛ - Tigrinya Türkçe - Turkish Ukrainian اردو - Urdu ئۇيغۇرچە - Uyghur Ўзбек - Uzbek Việt Nam - Vietnamese Wolof Yao Yorùbá - Yoruba Zarma زولو - Zulu
839 ಹದೀಸ್ಗಳು
ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ
ವರ್ಗಗಳು
ವರ್ಗಗಳು (21)
ಹದೀಸ್ನ ದರ್ಜೆ
ವರದಿಯಾದ ಗ್ರಂಥ
ಉಳಿದ ಮೂಲಗಳನ್ನು ತೋರಿಸಿ
ವರದಿಗಾರ
ಎಲ್ಲಾ ವರದಿಗಾರರನ್ನು ತೋರಿಸಿ (52)
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ, ಅಲ್ಲಾಹುಮ್ಮ ರಬ್ಬನಾ ಲಕಲ್ ಹಮ್ದ್, ಮಿಲ್ಅ ಸ್ಸಮಾವಾತಿ ವಮಿಲ್ಅಲ್ ಅರ್ದಿ, ವಮಿಲ್ಅ ಮಾ ಶಿಅ್ತ ಮಿನ್ ಶೈಇನ್ ಬಅ್ದ್."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
ಮೂರು ಸಮಯಗಳು. ಆ ಸಮಯಗಳಲ್ಲಿ ನಮಾಝ್ ಮಾಡುವುದನ್ನು ಅಥವಾ ನಮ್ಮ ಮೃತರನ್ನು ಸಮಾಧಿ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ನಿಷೇಧಿಸುತ್ತಿದ್ದರು: ಸೂರ್ಯನು ಸರಿಯಾಗಿ ಉದಯಿಸಲು ಪ್ರಾರಂಭಿಸಿ ಅದು (ಒಂದು ಈಟಿಯಷ್ಟು) ಎತ್ತರಕ್ಕೆ ಏರುವವರೆಗೆ. ನಡು ಮಧ್ಯಾಹ್ನ ಸೂರ್ಯನು ನೆತ್ತಿಯ ಮೇಲೆ ನಿಂತು ಅದು ಪಶ್ಚಿಮಕ್ಕೆ ವಾಲುವವರೆಗೆ. ಸೂರ್ಯನು ಅಸ್ತಮಿಸಲು ವಾಲಿಕೊಂಡು ಅದು ಸಂಪೂರ್ಣವಾಗಿ ಮುಳುಗುವವರೆಗೆ.
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. ಅಶ್ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು." (ಅಭಿವಂದನೆಗಳು, ನಮಾಝ್ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ. ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ).
ಇನ್ನೊಂದು ವರದಿಯಲ್ಲಿ: "ನಿಶ್ಚಯವಾಗಿಯೂ ಅಲ್ಲಾಹು ಶಾಂತಿಯಾಗಿದ್ದಾನೆ. ಆದ್ದರಿಂದ ನಿಮ್ಮಲ್ಲೊಬ್ಬರು ನಮಾಝಿನಲ್ಲಿ ಕುಳಿತುಕೊಳ್ಳುವಾಗ ಹೀಗೆ ಹೇಳಲಿ: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. (ಅಭಿವಂದನೆಗಳು, ನಮಾಝ್ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ). ಹೀಗೆ ಹೇಳಿದರೆ ಭೂಮ್ಯಾಕಾಶಗಳಲ್ಲಿರುವ ಅಲ್ಲಾಹನ ಎಲ್ಲಾ ನೀತಿವಂತ ದಾಸರಿಗೂ ಅದು ಅನ್ವಯಿಸುತ್ತದೆ. ಅಶ್ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು. (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ನಂತರ ಅವರಿಗೆ ಇಷ್ಟವಾದ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಿಮ್ಮಲ್ಲೊಬ್ಬರಿಗೆ ನಮಾಝ್ನಲ್ಲಿ ಸಂಶಯವುಂಟಾಗಿ ತಾನು ಮೂರು ರಕಅತ್ ನಿರ್ವಹಿಸಿದ್ದೇನೋ ಅಥವಾ ನಾಲ್ಕು ರಕಅತ್ ನಿರ್ವಹಿಸಿದ್ದೇನೋ ಎಂದು ತಿಳಿಯಲಾಗದಿದ್ದರೆ, ಅವನು ಆ ಸಂಶಯವನ್ನು ಉಪೇಕ್ಷಿಸಿ ತನಗೆ ಖಾತ್ರಿಯಿರುವುದರ ಆಧಾರದಲ್ಲಿ ಮುಂದುವರಿಯಲಿ. ನಂತರ, ಸಲಾಂ ಹೇಳುವುದಕ್ಕೆ ಮೊದಲು ಎರಡು ಸುಜೂದ್ಗಳನ್ನು ನಿರ್ವಹಿಸಲಿ. ಅವನು ಐದು ರಕಅತ್ ನಿರ್ವಹಿಸಿದ್ದರೆ, ಅವು ಅವನ ನಮಾಝನ್ನು ಸಮ ಸಂಖ್ಯೆಯಲ್ಲಿಡುತ್ತವೆ. ಇನ್ನು ಅವನು ಪೂರ್ಣವಾಗಿ ನಾಲ್ಕು ರಕಅತ್ ನಿರ್ವಹಿಸಿದ್ದರೆ, ಅವು ಶೈತಾನನಿಗೆ ಅವಮಾನವಾಗುತ್ತವೆ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಸಮಾಧಿಗಳ ಮೇಲೆ ಕೂರಬೇಡಿ ಮತ್ತು ಅವುಗಳ ಕಡೆಗೆ ನಮಾಝ್ ಮಾಡಬೇಡಿ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಫಜ್ರ್ನ ಅಝಾನ್ನಲ್ಲಿ ಮುಅದ್ದಿನ್ (ಅಝಾನ್ ಹೇಳುವವನು) 'ಹಯ್ಯ ಅಲಲ್-ಫಲಾಹ್' ಎಂದು ಹೇಳಿದಾಗ, 'ಅಸ್ಸಲಾತು ಖೈರುನ್ ಮಿನನ್ನೌಮ್' (ನಿದ್ರೆಗಿಂತ ನಮಾಝ್ ಉತ್ತಮವಾಗಿದೆ) ಎಂದು ಹೇಳುವುದು ಸುನ್ನತ್ನ ಭಾಗವಾಗಿದೆ".
ಸಹೀಹ್ ಇದನ್ನು ಇಬ್ನ್ ಖುಝೈಮ, ದಾರಕುತ್ನಿ ಮತ್ತು ಬೈಹಕಿ ವರದಿ ಮಾಡಿದ್ದಾರೆ.
ಒಮ್ಮೆ ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯನ್ನು ಪ್ರವೇಶಿಸಿದರು. ಆಗ ಒಬ್ಬ ವ್ಯಕ್ತಿ ಮಸೀದಿಯನ್ನು ಪ್ರವೇಶಿಸಿ ನಮಾಝ್ ಮಾಡಿದರು. ನಂತರ ಅವರು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಸಲಾಮ್ ಹೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಸಲಾಮ್ಗೆ ಉತ್ತರಿಸಿ ಹೇಳಿದರು: "ಮರಳಿಹೋಗಿ ನಮಾಝ್ ಮಾಡಿರಿ. ಏಕೆಂದರೆ ನೀವು ನಮಾಝ್ ಮಾಡಿಲ್ಲ." ಆ ವ್ಯಕ್ತಿ ಮೊದಲಿನಂತೆ ನಮಾಝ್ ಮಾಡಿ ಮತ್ತೆ ಬಂದು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಸಲಾಮ್ ಹೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮರಳಿಹೋಗಿ ನಮಾಝ್ ಮಾಡಿರಿ. ಏಕೆಂದರೆ ನೀವು ನಮಾಝ್ ಮಾಡಿಲ್ಲ." ಹೀಗೆ ಮೂರು ಬಾರಿ ನಡೆಯಿತು. ಆಗ ಆ ವ್ಯಕ್ತಿ ಹೇಳಿದರು: "ನಿಮ್ಮನ್ನು ಸತ್ಯದೊಂದಿಗೆ ಕಳುಹಿಸಿದವನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ನನಗೆ ಇದಕ್ಕಿಂತ ಉತ್ತಮವಾಗಿ ನಮಾಝ್ ಮಾಡಲು ಬರುವುದಿಲ್ಲ. ಆದ್ದರಿಂದ ನನಗೆ ಕಲಿಸಿಕೊಡಿರಿ." ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ನಮಾಝ್ಗೆ ನಿಂತಾಗ ತಕ್ಬೀರ್ (ಅಲ್ಲಾಹು ಅಕ್ಬರ್) ಹೇಳಿರಿ. ನಂತರ ಕುರ್ಆನ್ನಿಂದ ನಿಮಗೆ ಸುಲಭವಾದಷ್ಟನ್ನು ಪಠಿಸಿರಿ. ನಂತರ ನೀವು ರುಕೂಅ್ನಲ್ಲಿ ಸಂಪೂರ್ಣವಾಗಿ ಶಾಂತವಾಗುವವರೆಗೆ ರುಕೂಅ್ ಮಾಡಿರಿ. ನಂತರ ನೀವು ನೇರವಾಗಿ ನಿಲ್ಲುವವರೆಗೆ ಎದ್ದೇಳಿರಿ. ನಂತರ ನೀವು ಸುಜೂದ್ನಲ್ಲಿ ಸಂಪೂರ್ಣವಾಗಿ ಶಾಂತವಾಗುವವರೆಗೆ ಸುಜೂದ್ ಮಾಡಿರಿ. ನಂತರ ನೀವು ಸಂಪೂರ್ಣ ಶಾಂತಚಿತ್ತರಾಗಿ ಕೂರುವವರೆಗೆ ಕುಳಿತುಕೊಳ್ಳಿರಿ. ನಿಮ್ಮ ಎಲ್ಲಾ ನಮಾಝ್ಗಳಲ್ಲೂ ಹೀಗೆಯೇ ಮಾಡಿರಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.