Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 11 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ

ಹದೀಸ್‌ನ ದರ್ಜೆ

"ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಿಂಬರ್ (ಪ್ರವಚನ ಪೀಠ) ನ ಮೇಲೆ ನಿಂತು, ದಾನ-ಧರ್ಮ, (ಭಿಕ್ಷೆ ಬೇಡುವುದರಿಂದ) ದೂರವಿರುವುದು, ಮತ್ತು ಬೇಡುವುದು ಮುಂತಾದವುಗಳ ಬಗ್ಗೆ ಉಲ್ಲೇಖಿಸುತ್ತಾ ಹೇಳಿದರು: "ಮೇಲಿನ ಕೈಯು ಕೆಳಗಿನ ಕೈಗಿಂತ ಉತ್ತಮವಾಗಿದೆ. ಮೇಲಿನ ಕೈ ಎಂದರೆ ಖರ್ಚು ಮಾಡುವ ಕೈ, ಮತ್ತು ಕೆಳಗಿನ ಕೈ ಎಂದರೆ ಬೇಡುವ ಕೈ".
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಿತ್ರ್ ಝಕಾತನ್ನು ಒಂದು ಸಾಅ್ ಖರ್ಜೂರ ಅಥವಾ ಒಂದು ಸಾಅ್ ಬಾರ್ಲಿಯಂತೆ ಗುಲಾಮರು, ಸ್ವತಂತ್ರರು, ಪುರುಷರು, ಸ್ತ್ರೀಯರು, ಕಿರಿಯರು, ಹಿರಿಯರು ಮುಂತಾದ ಎಲ್ಲಾ ಮುಸ್ಲಿಮರ ಮೇಲೆ ಕಡ್ಡಾಯಗೊಳಿಸಿದರು. ಜನರು ನಮಾಝ್‌ಗೆ ಹೊರಡುವ ಮೊದಲು ಅದನ್ನು ನೀಡಬೇಕೆಂದು ಅವರು ಆದೇಶಿಸಿದರು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಿಮ್ಮಲ್ಲಿ ಪ್ರತಿಯೊಬ್ಬರೊಂದಿಗೂ ಅಲ್ಲಾಹು ನೇರವಾಗಿ ಮಾತನಾಡುವನು. ಅಲ್ಲಾಹು ಮತ್ತು ಅವನ ನಡುವೆ ಯಾವುದೇ ಅನುವಾದಕನು ಇರುವುದಿಲ್ಲ. ಆಗ ಅವನು ತನ್ನ ಬಲಭಾಗಕ್ಕೆ ನೋಡುವನು. ಅಲ್ಲಿ ತಾನು ಮುಂದಕ್ಕೆ ಕಳುಹಿಸಿದ ಕರ್ಮಗಳಲ್ಲದೆ ಬೇರೇನೂ ಅವನು ಕಾಣುವುದಿಲ್ಲ. ಅವನು ತನ್ನ ಎಡಭಾಗಕ್ಕೆ ನೋಡುವನು. ಅಲ್ಲಿ ತಾನು ಮುಂದಕ್ಕೆ ಕಳುಹಿಸಿದ ಕರ್ಮಗಳಲ್ಲದೆ ಬೇರೇನೂ ಅವನು ಕಾಣುವುದಿಲ್ಲ. ಅವನು ತನ್ನ ಮುಂಭಾಗಕ್ಕೆ ನೋಡುವನು. ಅಲ್ಲಿ ಅವನು ತನ್ನ ಮುಂದೆ ನರಕವನ್ನಲ್ಲದೆ ಬೇರೇನೂ ಕಾಣುವುದಿಲ್ಲ. ಆದ್ದರಿಂದ ನೀವು ಒಂದು ತುಂಡು ಖರ್ಜೂರದ ಮೂಲಕವಾದರೂ ನಿಮ್ಮನ್ನು ನರಕದಿಂದ ಕಾಪಾಡಿಕೊಳ್ಳಿರಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮೊಂದಿಗೆ ಇದ್ದಾಗ, ನಾವು ಚಿಕ್ಕವರು, ದೊಡ್ಡವರು, ಸ್ವತಂತ್ರರು ಮತ್ತು ಗುಲಾಮರು ಹೀಗೆ ಎಲ್ಲರ ಪರವಾಗಿಯೂ, ಒಂದು ಸಾಅ್ ಆಹಾರ, ಅಥವಾ ಒಂದು ಸಾಅ್ ಗಿಣ್ಣು, ಅಥವಾ ಒಂದು ಸಾಅ್ ಬಾರ್ಲಿ, ಅಥವಾ ಒಂದು ಸಾಅ್ ಖರ್ಜೂರ, ಅಥವಾ ಒಂದು ಸಾಅ್ ಒಣದ್ರಾಕ್ಷಿ ಫಿತ್ರ್ ಝಕಾತ್ ನೀಡುತ್ತಿದ್ದೆವು. ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮ್ಮ ಬಳಿಗೆ ಹಜ್ಜ್ ಅಥವಾ ಉಮ್ರ ನಿರ್ವಹಿಸಲು ಬರುವ ತನಕ ನಾವು ಹೀಗೆಯೇ ಕೊಡುತ್ತಿದ್ದೆವು. ಅವರು ಮಿಂಬರ್ (ಪ್ರವಚನ ಪೀಠ) ಏರಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಅವರು ಜನರಿಗೆ ಹೇಳಿದ ಒಂದು ಮಾತು ಹೀಗಿತ್ತು: "ನಿಶ್ಚಯವಾಗಿಯೂ ಸಿರಿಯಾದ ಎರಡು ಮುದ್ದ್ ಗೋಧಿಯು ಒಂದು ಸಾಅ್ ಖರ್ಜೂರಕ್ಕೆ ಸಮವಾಗಿದೆ ಎಂದು ನಾನು ಕಾಣುತ್ತೇನೆ." ಜನರು ಅದನ್ನು ಅನುಸರಿಸಿದರು. (ಅಬೂ ಸಈದ್ ಹೇಳುತ್ತಾರೆ): ಆದರೆ ನಾನು ಜೀವಂತವಿರುವವರೆಗೂ ಪ್ರವಾದಿಯ ಕಾಲದಂತೆಯೇ ಫಿತ್ರ್ ಝಕಾತ್ ನೀಡುವುದನ್ನು ಮುಂದುವರಿಸಿದೆನು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ಅಲ್ಲಾಹು ಹೇಳಿದನು: "ಓ ಆದಮನ ಮಗನೇ! ಖರ್ಚು ಮಾಡು. ನಾನು ನಿನಗಾಗಿ ಖರ್ಚು ಮಾಡುತ್ತೇನೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವವನು ಅವುಗಳ ಹಕ್ಕನ್ನು (ಝಕಾತನ್ನು) ನೀಡದಿದ್ದರೆ, ಪುನರುತ್ಥಾನ ದಿನದಂದು ಅವುಗಳನ್ನು ಅಗ್ನಿಯ ಹಾಳೆಗಳಾಗಿ ಪರಿವರ್ತಿಸಿ, ನರಕಾಗ್ನಿಯಲ್ಲಿ ಅವುಗಳನ್ನು ಕಾಯಿಲಾಗುವುದು. ನಂತರ ಅವನ ಪಾರ್ಶ್ವ, ಹಣೆ ಮತ್ತು ಬೆನ್ನುಗಳಿಗೆ ಅದರಿಂದ ಬರೆ ಹಾಕಲಾಗುವುದು. ಅವು ತಣ್ಣಗಾದಾಗಲೆಲ್ಲಾ ಅದನ್ನು ಪುನಃ ಕಾಯಿಸಲಾಗುವುದು. ಐವತ್ತು ಸಾವಿರ ವರ್ಷಗಳಷ್ಟು ದೀರ್ಘವಾದ ದಿನದಂದು ಅಲ್ಲಾಹು ಅವನ ದಾಸರ ಮಧ್ಯೆ ತೀರ್ಪು ನೀಡಿ ಮುಗಿಸುವ ತನಕ ಇದು ಮುಂದುವರಿಯುವುದು. ನಂತರ ಅವನು ಒಂದೋ ಸ್ವರ್ಗಕ್ಕೆ ಅಥವಾ ನರಕಕ್ಕೆ ಅವನ ದಾರಿಯನ್ನು ಕಂಡುಕೊಳ್ಳುವನು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.