Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 34 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ
"ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ತನಗಾಗಿ ಇಷ್ಟಪಡುವುದನ್ನು ತನ್ನ ಸಹೋದರನಿಗಾಗಿಯೂ ಇಷ್ಟಪಡುವ ತನಕ ನಿಮ್ಮಲ್ಲಿ ಯಾರೂ (ನಿಜವಾದ) ಸತ್ಯವಿಶ್ವಾಸಿಯಾಗುವುದಿಲ್ಲ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಜನರು ಪೂರ್ವ ಪ್ರವಾದಿಗಳಿಂದ ಪಡೆದ ಮಾತುಗಳಲ್ಲಿ ಒಂದು ಏನೆಂದರೆ: ನಿನಗೆ ನಾಚಿಕೆ ಇಲ್ಲದಿದ್ದರೆ ನೀನಿಚ್ಛಿಸುವುದನ್ನು ಮಾಡು."
ಸಹೀಹ್ ಇದನ್ನು ಬುಖಾರಿ ವರದಿ ಮಾಡಿದ್ದಾರೆ.
"ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
“ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ನೆರೆಮನೆಯವನನ್ನು ಗೌರವಿಸಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ಅತಿಥಿಗಳನ್ನು ಗೌರವಿಸಲಿ.”
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.