عربي - Arabic English Qafár af - Afar Afrikaans - Afrikanns Akan Shqip - Albanian አማርኛ - Amharic Հայերեն - Armenian অসমীয়া - Assamese Azərbaycanca - Azerbaijani Bamanankan - Bambara Bassa Bemba বাংলা - Bengali Bosanski - Bosnian Български - Bulgarian မြန်မာဘာသာ - Burmese Bisaya - Cebuano Cham Нохчий - Chechen chiCheŵa - Chewa 中文 - Chinese Адыгэбзэ - Circassian Hrvatski - Croatian Česky - Czech Dagbani Dansk - Danish فارسی دری - Dari Dendi ދިވެހި ބަސް - Dhivehi Nederlands - Dutch إستوني - Estonian Suomi - Finnish Français - French Fulfulde - Fula ქართული - Georgian Deutsch - German Ελληνικά - Greek ગુજરાતી - Gujrati Kreyòl ayisyen - Haitian Creole Hausa हिन्दी - Hindi Magyar - Hungarian Igbo Indonesia - Indonesian Italiano - Italian 日本語 - Japanese Jóola - Jola ಕನ್ನಡ - Kannada Қазақша - Kazakh ភាសាខ្មែរ - Khmer Kikuyu Ikinyarwanda - Kinyarwanda Ikirundi - Kirundi 한국어 - Korean كوردی سۆرانی - kurdish كوردي kurmancî - Kurmanji Kyrgyz ລາວ - Lao latviešu - Latvian Lingala lietuvių - Lithuanian Luganda Македонски - Macedonian Maguindanaon Malagasy - Malagasy Bahasa Melayu - Malay മലയാളം - Malayalam Mandinka मराठी - Marathi Mõõré - Moore नेपाली - Nepali أنكو - NKo Norwegian ଓଡ଼ିଆ - Odia oromoo - Oromo پښتو - Pashto فارسی - Persian Polski - Polish Portuguese ਪੰਜਾਬੀ - Punjabi Română - Romanian Русский - Russian Српски - Serbian Shona සිංහල - Sinhala Slovenščina - Slovenian Soomaaliga - Somali Soninke Sesotho - Sotho Español - Spanish Kiswahili - Swahili Svenska - Swedish Tagalog Тоҷикӣ - Tajik தமிழ் - Tamil తెలుగు - Telugu ไทย - Thai ትግረኛ - Tigrinya Türkçe - Turkish Ukrainian اردو - Urdu ئۇيغۇرچە - Uyghur Ўзбек - Uzbek Việt Nam - Vietnamese Wolof Yao Yorùbá - Yoruba Zarma زولو - Zulu
839 ಹದೀಸ್‌ಗಳು
ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ
ವರ್ಗಗಳು
ಹದೀಸ್‌ನ ದರ್ಜೆ
ವರದಿಯಾದ ಗ್ರಂಥ
ವರದಿಗಾರ
“ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ಯಾರು ಅವನನ್ನು ಭೇಟಿಯಾಗುತ್ತಾನೋ ಅವನು ನರಕವನ್ನು ಪ್ರವೇಶಿಸುತ್ತಾನೆ.”
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನ ಅತ್ಯಂತ ಕೆಳಮಟ್ಟದ ಸ್ಥಾನವು (ಹೇಗಿರುತ್ತದೆ) ಎಂದರೆ, ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಏನಾದರೂ ಇಚ್ಚಿಸು!'. ಆಗ ಅವನು ಇಚ್ಚಿಸುತ್ತಾನೆ, ಮತ್ತು ಇಚ್ಚಿಸುತ್ತಾನೆ (ಇಚ್ಚಿಸುತ್ತಲೇ ಇರುತ್ತಾನೆ). ನಂತರ ಅವನೊಂದಿಗೆ (ಅಲ್ಲಾಹು) ಕೇಳುತ್ತಾನೆ: 'ನೀನು (ಎಲ್ಲವನ್ನೂ) ಇಚ್ಚಿಸಿದೆಯಾ?'. ಅವನು ಹೇಳುತ್ತಾನೆ: 'ಹೌದು'. ಆಗ ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)' ".
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವರಿಗೆ ಸ್ವರ್ಗವು ಖಚಿತವಾಯಿತು". ಇದನ್ನು ಕೇಳಿ ಅಬೂ ಸಈದ್‌ಗೆ ಆಶ್ಚರ್ಯವಾಯಿತು. ಅವರು ಹೇಳಿದರು: "ಓ ಅಲ್ಲಾಹುವಿನ ಸಂದೇಶವಾಹಕರೇ, ಇದನ್ನು ನನಗೆ ಮತ್ತೊಮ್ಮೆ ಹೇಳಿ". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹಾಗೆಯೇ ಮಾಡಿದರು (ಮತ್ತೊಮ್ಮೆ ಹೇಳಿದರು). ನಂತರ ಹೇಳಿದರು: "ಮತ್ತು ಇನ್ನೊಂದು (ವಿಷಯ) ಇದೆ. ಅದರ ಮೂಲಕ ದಾಸನನ್ನು ಸ್ವರ್ಗದಲ್ಲಿ ನೂರು ಹಂತಗಳಷ್ಟು ಎತ್ತರಿಸಲಾಗುತ್ತದೆ. ಪ್ರತಿಯೆರಡು ಹಂತಗಳ ನಡುವಿನ ಅಂತರವು ಆಕಾಶ ಮತ್ತು ಭೂಮಿಯ ನಡುವಿನ ಅಂತರದಷ್ಟಿರುತ್ತದೆ". ಅಬೂ ಸಈದ್ ಕೇಳಿದರು: "ಅದು ಯಾವುದು, ಓ ಅಲ್ಲಾಹುವಿನ ಸಂದೇಶವಾಹಕರೇ?". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು (ಶ್ರಮಿಸುವುದು/ಹೋರಾಡುವುದು), ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು".
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಸ್ವರ್ಗವಾಸಿಗಳು ಸ್ವರ್ಗವನ್ನು ಪ್ರವೇಶಿಸಿದಾಗ ಸರ್ವಶಕ್ತನಾದ ಅಲ್ಲಾಹು ಕೇಳುವನು: "ನಾನು ನಿಮಗೆ ಇನ್ನೂ ಏನಾದರೂ ಹೆಚ್ಚಿಗೆ ಕೊಡಬೇಕೆಂದು ನೀವು ಬಯಸುತ್ತೀರಾ?" ಅವರು ಹೇಳುವರು: "ನೀನು ನಮ್ಮ ಮುಖಗಳನ್ನು ಬೆಳಗಿಸಲಿಲ್ಲವೇ? ನೀನು ನಮ್ಮನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸಲಿಲ್ಲವೇ? ನೀನು ನಮ್ಮನ್ನು ನರಕದಿಂದ ಪಾರು ಮಾಡಲಿಲ್ಲವೇ?" ಆಗ ಅಲ್ಲಾಹು ಅವನ ಪರದೆಯನ್ನು ಸರಿಸುವನು. ಆಗ ಅವರಿಗೆ ನೀಡಲಾದ ಎಲ್ಲಾ ವಸ್ತುಗಳಲ್ಲಿ ಅವರ ಪರಿಪಾಲಕನ (ಅಲ್ಲಾಹನ) ಕಡೆಗೆ ನೋಡುವುದಕ್ಕಿಂತಲೂ ಹೆಚ್ಚು ಇಷ್ಟವಾದುದು ಅವರಿಗೆ ಬೇರೆ ಇರುವುದಿಲ್ಲ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಖಂಡಿತವಾಗಿಯೂ ಸ್ವರ್ಗದಲ್ಲಿ ಒಂದು ಮಾರುಕಟ್ಟೆ ಇದೆ. ಅವರು (ಸ್ವರ್ಗವಾಸಿಗಳು) ಪ್ರತಿ ಶುಕ್ರವಾರ ಅಲ್ಲಿಗೆ ಬರುತ್ತಾರೆ. ಆಗ ಉತ್ತರದಿಂದ ಗಾಳಿ ಬೀಸಿ, ಅವರ ಮುಖ ಮತ್ತು ವಸ್ತ್ರಗಳ ಮೇಲೆ (ಸುವಾಸನೆಯನ್ನು) ಬೀರುತ್ತದೆ. ಆಗ ಅವರ ಸೌಂದರ್ಯ ಮತ್ತು ಅಂದವು ಹೆಚ್ಚಾಗುತ್ತದೆ. ನಂತರ ಅವರು ಆ ಹೆಚ್ಚಾದ ಸೌಂದರ್ಯ ಮತ್ತು ಅಂದದೊಂದಿಗೆ, ತಮ್ಮ ಕುಟುಂಬದವರ ಬಳಿಗೆ ಹಿಂತಿರುಗಿದಾಗ, ಅವರ ಕುಟುಂಬದವರು ಹೇಳುತ್ತಾರೆ: 'ಅಲ್ಲಾಹನಾಣೆ, ನಮ್ಮ (ನ್ನು ಬಿಟ್ಟುಹೋದ) ನಂತರ ನೀವು ಸೌಂದರ್ಯ ಮತ್ತು ಅಂದವನ್ನು ಹೆಚ್ಚಿಸಿಕೊಂಡಿದ್ದೀರಿ'. ಆಗ ಅವರು ಹೇಳುತ್ತಾರೆ: 'ಮತ್ತು ನೀವೂ ಸಹ, ಅಲ್ಲಾಹನಾಣೆ, (ನಾವು ಬಿಟ್ಟುಹೋದ) ನಂತರ ಸೌಂದರ್ಯ ಮತ್ತು ಅಂದವನ್ನು ಹೆಚ್ಚಿಸಿಕೊಂಡಿದ್ದೀರಿ'".
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಎರಡು ವಿಧಗಳ ಜನರು ನರಕವಾಸಿಗಳಾಗಿದ್ದಾರೆ. ಆದರೆ ನಾನು ಅವರನ್ನು ಕಂಡಿಲ್ಲ. ದನದ ಬಾಲದಂತಹ ಚಾಟಿಯನ್ನು ಹಿಡಿದುಕೊಂಡು, ಅದರಿಂದ ಜನರಿಗೆ ಥಳಿಸುವವರು. ಬಟ್ಟೆ ಧರಿಸಿದ್ದರೂ ನಗ್ನರಾಗಿರುವ ಮತ್ತು (ಜನರನ್ನು ಕೆಡುಕಿನ ಕಡೆಗೆ) ವಾಲಿಸುವ ಹಾಗೂ ಸ್ವಯಂ ಅದರೆಡೆಗೆ ವಾಲುವ ಸ್ತ್ರೀಯರು. ಅವರ ತಲೆಗಳು ವಾಲಿಕೊಂಡಿರುವ ಒಂಟೆಗಳ ಗೂನುಗಳಂತಿವೆ. ಅವರು ಸ್ವರ್ಗವನ್ನು ಪ್ರವೇಶಿಸುವುದಿಲ್ಲ ಮತ್ತು ಅದರ ಪರಿಮಳವನ್ನೂ ಅನುಭವಿಸುವುದಿಲ್ಲ. ನಿಶ್ಚಯವಾಗಿಯೂ ಅದರ ಪರಿಮಳವನ್ನು ಇಂತಿಷ್ಟು ದೂರದಿಂದಲೇ ಅನುಭವಿಸಬಹುದು."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ನನ್ನ ಮುಂದೆ ಸ್ವರ್ಗ ಮತ್ತು ನರಕವನ್ನು ಪ್ರದರ್ಶಿಸಲಾಯಿತು. ಇಂದಿನಂತೆ ಒಳಿತು ಮತ್ತು ಕೆಡುಕನ್ನು (ಒಟ್ಟಿಗೆ) ನಾನು ಎಂದಿಗೂ ನೋಡಿರಲಿಲ್ಲ. ನಾನು ತಿಳಿದಿರುವುದನ್ನು ನೀವು ತಿಳಿದಿದ್ದರೆ, ನೀವು ಖಂಡಿತವಾಗಿಯೂ ಕಡಿಮೆ ನಗುತ್ತಿದ್ದಿರಿ ಮತ್ತು ಹೆಚ್ಚು ಅಳುತ್ತಿದ್ದಿರಿ". ಅವರು (ಅನಸ್) ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಿಗೆ ಅದಕ್ಕಿಂತ ಕಠಿಣವಾದ ದಿನವು ಬಂದಿರಲಿಲ್ಲ. ಅವರು (ಅನಸ್) ಹೇಳುತ್ತಾರೆ: ಅವರು (ಸಹಾಬಿಗಳು) ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಅವರು ಬಿಕ್ಕಳಿಸಿ ಅಳುವ ಶಬ್ದ ಕೇಳಿಬರುತ್ತಿತ್ತು. ಅನಸ್ ಹೇಳುತ್ತಾರೆ: ಆಗ ಉಮರ್ ಎದ್ದು ನಿಂತು ಹೇಳಿದರು: "ನಾವು ಅಲ್ಲಾಹನನ್ನು ಪರಿಪಾಲಕನಾಗಿ, ಇಸ್ಲಾಂ ಅನ್ನು ಧರ್ಮವಾಗಿ, ಮತ್ತು ಮುಹಮ್ಮದ್ ರನ್ನು ಪ್ರವಾದಿಯಾಗಿ ತೃಪ್ತಿಪಟ್ಟಿದ್ದೇವೆ". ಅನಸ್ ಹೇಳುತ್ತಾರೆ: ಆಗ ಒಬ್ಬ ವ್ಯಕ್ತಿ ಎದ್ದು ನಿಂತು ಕೇಳಿದರು: "ನನ್ನ ತಂದೆ ಯಾರು?" ಪ್ರವಾದಿ ಹೇಳಿದರು: "ನಿನ್ನ ತಂದೆ ಇಂತಿಂತಹ ವ್ಯಕ್ತಿ". ಆಗ ಈ ವಚನವು ಅವತೀರ್ಣವಾಯಿತು: “ಓ ಸತ್ಯವಿಶ್ವಾಸಿಗಳೇ, ಕೆಲವು ವಿಷಯಗಳ ಬಗ್ಗೆ ಕೇಳಬೇಡಿ. ಅವು ನಿಮಗೆ ಬಹಿರಂಗಗೊಳಿಸಲ್ಪಟ್ಟರೆ ನಿಮಗೆ ನೋವು ಉಂಟುಮಾಡಬಹುದು.” [ಸೂರ ಅಲ್-ಮಾಇದಾ: 101].
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಅತ್ಯಂತ ಪರಿಶುದ್ಧ ಮತ್ತು ಸರ್ವೋನ್ನತನಾದ ಅಲ್ಲಾಹು ಹೇಳುತ್ತಾನೆ: 'ನಾನು ನನ್ನ ಸಜ್ಜನ ದಾಸರಿಗಾಗಿ (ಸ್ವರ್ಗದಲ್ಲಿ) ಏನೇನು ಸಿದ್ಧಪಡಿಸಿದ್ದೇನೆಂದರೆ, (ಅಂತಹ ಸುಖಸಾಧನಗಳನ್ನು) ಯಾವ ಕಣ್ಣೂ ಕಂಡಿಲ್ಲ, ಯಾವ ಕಿವಿಯೂ ಕೇಳಿಲ್ಲ, ಮತ್ತು ಯಾವ ಮಾನವನ ಹೃದಯಕ್ಕೂ ಅದರ ಕಲ್ಪನೆ ಬಂದಿಲ್ಲ' ". ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳುತ್ತಾರೆ: ನೀವು ಇಚ್ಛಿಸುವುದಾದರೆ ಪಠಿಸಿರಿ: "ಯಾವುದೇ ಆತ್ಮಕ್ಕೂ ತಿಳಿದಿಲ್ಲ, ಕಣ್ಣುಗಳಿಗೆ ತಂಪು ನೀಡುವಂತಹ ಏನೆಲ್ಲಾ ಅವರಿಗಾಗಿ ಗುಪ್ತವಾಗಿಡಲಾಗಿದೆ ಎಂದು." [ಸೂರ ಸಜ್ದಾ: 32:17].
ಸಹೀಹ್ ಬುಖಾರಿ ಮತ್ತು ಮುಸ್ಲಿಂ.