Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 5 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ

ಹದೀಸ್‌ನ ದರ್ಜೆ

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) "ಅಲ್ಲಾಹನ ಸಹಾಯ ಮತ್ತು ವಿಜಯ ಬಂದಾಗ." [ಸೂರ ನಸ್ರ್: 1] ಎಂಬ ವಚನವು ಅವತೀರ್ಣವಾದ ಬಳಿಕ ಅವರು ಯಾವುದೇ ನಮಾಝ್ ಮಾಡಿದರೂ ಅದರಲ್ಲಿ "ಸುಬ್‌ಹಾನಕ ರಬ್ಬನಾ ವಬಿಹಮ್ದಿಕ್, ಅಲ್ಲಾಹುಮ್ಮಗ್‌ಫಿರ್ ಲೀ (ನಮ್ಮ ಪರಿಪಾಲಕನೇ, ನೀನು ಪರಮ ಪವಿತ್ರನು. ಸ್ತುತಿಗಳೆಲ್ಲವೂ ನಿನಗೆ ಸಲ್ಲುತ್ತದೆ. ಓ ಅಲ್ಲಾಹ್, ನನ್ನನ್ನು ಕ್ಷಮಿಸು) ಎಂದು ಹೇಳದೇ ಇರುತ್ತಿರಲಿಲ್ಲ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಹೀಗೆ ಹೇಳುತ್ತಿದ್ದರು: “ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಅಲ್ಲಾಹುಮ್ಮ ಲಾ ಮಾನಿಅ ಲಿಮಾ ಅಅ್‌ತಯ್ತ ವಲಾ ಮುಅ್‌ತಿಯ ಲಿಮಾ ಮನಅ್‌ತ, ವಲಾ ಯನ್‌ಫಉ ದಲ್-ಜದ್ದಿ ಮಿನ್ಕಲ್ ಜದ್ದ್."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ ಹೇಗೆ ಸಲಾಂ ಹೇಳುವುದೆಂದು ನಮಗೆ ತಿಳಿದಿದೆ. ಆದರೆ ನಾವು ನಿಮ್ಮ ಮೇಲೆ ಸಲಾತ್ ಹೇಳುವುದು ಹೇಗೆ?" ಅವರು ಹೇಳಿದರು: "ಹೇಳಿರಿ: ಓ ಅಲ್ಲಾಹ್, ಮುಹಮ್ಮದ್‌ರಿಗೆ ಮತ್ತು ಮುಹಮ್ಮದ್‌ರ ಕುಟುಂಬಕ್ಕೆ ಶಾಂತಿಯನ್ನು ವರ್ಷಿಸು, ಇಬ್ರಾಹೀಮರ ಕುಟುಂಬಕ್ಕೆ ಶಾಂತಿಯನ್ನು ವರ್ಷಿಸಿದಂತೆ. ನಿಶ್ಚಯವಾಗಿಯೂ ನೀನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿರುವೆ. ಓ ಅಲ್ಲಾಹ್, ಮುಹಮ್ಮದ್‌ರಿಗೆ ಮತ್ತು ಮುಹಮ್ಮದ್‌ರ ಕುಟುಂಬಕ್ಕೆ ಸಮೃದ್ಧಿಯನ್ನು ವರ್ಷಿಸು, ಇಬ್ರಾಹೀಮರ ಕುಟುಂಬಕ್ಕೆ ಸಮೃದ್ಧಿಯನ್ನು ವರ್ಷಿಸಿದಂತೆ. ನಿಶ್ಚಯವಾಗಿಯೂ ನೀನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿರುವೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಾ ಹೇಳುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ್ಷೆಯಿಂದ ರಕ್ಷೆ ಬೇಡುತ್ತೇನೆ." ಮುಸ್ಲಿಂರ ಇನ್ನೊಂದು ವರದಿಯಲ್ಲಿ: "ನಿಮ್ಮಲ್ಲೊಬ್ಬನು ಕೊನೆಯ ತಶಹ್ಹುದ್ ಪಠಿಸಿದ ನಂತರ ನಾಲ್ಕು ವಿಷಯಗಳಿಂದ ಅಲ್ಲಾಹನಲ್ಲಿ ರಕ್ಷೆ ಬೇಡಲಿ. ನರಕ ಶಿಕ್ಷೆಯಿಂದ, ಸಮಾಧಿಯ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಕೆಡುಕಿನಿಂದ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.