Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 18 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ

ಹದೀಸ್‌ನ ದರ್ಜೆ

"ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವನು ಯಾರು?" ಅವರು ಉತ್ತರಿಸಿದರು: "ಯಾರು ನನ್ನ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಮತ್ತು ಯಾರು ನನ್ನ ಆಜ್ಞೆಗಳನ್ನು ಪಾಲಿಸುವುದಿಲ್ಲವೋ ಅವನು (ಸ್ವರ್ಗಕ್ಕೆ ಹೋಗಲು) ನಿರಾಕರಿಸಿದನು."
ಸಹೀಹ್ ಇದನ್ನು ಬುಖಾರಿ ವರದಿ ಮಾಡಿದ್ದಾರೆ.
"ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು. ಅವರು ಮಕ್ಕಾದಲ್ಲಿ ಹದಿಮೂರು ವರ್ಷ ತಂಗಿದರು. ನಂತರ ಅವರಿಗೆ ಹಿಜ್ರ (ವಲಸೆ) ಮಾಡಲು ಆದೇಶ ಬಂತು. ಅವರು ಮದೀನಕ್ಕೆ ಹಿಜ್ರ ಮಾಡಿದರು. ಅಲ್ಲಿ ಅವರು ಹತ್ತು ವರ್ಷ ತಂಗಿದರು. ನಂತರ ಅವರು ನಿಧನರಾದರು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ. ಒಂದು ತಿಂಗಳ ಪ್ರಯಾಣದಷ್ಟು ದೂರದ ತನಕ ನನಗೆ ಭಯದ ಮೂಲಕ ಸಹಾಯ ಮಾಡಲಾಗಿದೆ. ನನಗೆ ಭೂಮಿಯನ್ನು ಮಸೀದಿ ಮತ್ತು ಶುದ್ಧೀಕರಣದ ವಸ್ತುವಾಗಿ ಮಾಡಿಕೊಡಲಾಗಿದೆ. ನನ್ನ ಸಮುದಾಯದ ವ್ಯಕ್ತಿಗೆ ಯಾವುದೇ ಸ್ಥಳದಲ್ಲಿ ನಮಾಝಿನ ಸಮಯವಾದರೂ ಆತ ನಮಾಝ್ ಮಾಡಬಹುದು. ನನಗೆ ಯುದ್ಧಾರ್ಜಿತ ಸೊತ್ತನ್ನು ಅನುಮತಿಸಲಾಗಿದೆ. ನನಗಿಂತ ಮೊದಲಿನ ಯಾವುದೇ ಪ್ರವಾದಿಗೂ ಇದನ್ನು ಅನುಮತಿಸಲಾಗಿರಲಿಲ್ಲ. ನನಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ನೀಡಲಾಗಿದೆ. ಇತರ ಪ್ರವಾದಿಗಳನ್ನು ವಿಶೇಷವಾಗಿ ಅವರ ಜನತೆಗೆ ಮಾತ್ರ ಕಳುಹಿಸಲಾಗುತ್ತಿತ್ತು. ಆದರೆ ನನ್ನನ್ನು ಸಂಪೂರ್ಣ ಮನುಕುಲಕ್ಕೆ ಕಳುಹಿಸಲಾಗಿದೆ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."
ಸಹೀಹ್ ಇದನ್ನು ಬುಖಾರಿ ಮತ್ತು ಮುಸ್ಲಿಂ ವರದಿ ಮಾಡಿದ್ದಾರೆ.
"ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ನಾನು ನಿಮಗೆ ಯಾವುದನ್ನು ನಿಷೇಧಿಸಿದ್ದೇನೆಯೋ, ಅದರಿಂದ ಸಂಪೂರ್ಣವಾಗಿ ದೂರವಿರಿ. ನಾನು ನಿಮಗೆ ಯಾವುದನ್ನು ಆದೇಶಿಸಿದ್ದೇನೆಯೋ, ಅದನ್ನು ನಿಮಗೆ ಸಾಧ್ಯವಾದಷ್ಟು ಮಾಡಿರಿ. ಏಕೆಂದರೆ, ನಿಮಗಿಂತ ಹಿಂದಿನವರನ್ನು ನಾಶಮಾಡಿದ್ದು ಅವರ ಅತಿಯಾದ ಪ್ರಶ್ನೆಗಳು, ಮತ್ತು ಅವರು ತಮ್ಮ ಪ್ರವಾದಿಗಳೊಂದಿಗೆ ವ್ಯಕ್ತಿಪಡಿಸಿದ ಭಿನ್ನಾಭಿಪ್ರಾಯಗಳಾಗಿದ್ದವು."
ಸಹೀಹ್ ಇದನ್ನು ಬುಖಾರಿ ಮತ್ತು ಮುಸ್ಲಿಂ ವರದಿ ಮಾಡಿದ್ದಾರೆ.
"ಯಾವುದೇ ಪ್ರವಾದಿಯಿದ್ದರೂ, ಮನುಷ್ಯರು ಅವರ ಮೇಲೆ ವಿಶ್ವಾಸವಿಡುವಂತಹ ಪವಾಡಗಳನ್ನು (ದೃಷ್ಟಾಂತಗಳನ್ನು) ಅವರಿಗೆ ನೀಡಲಾಗಿತ್ತು. ಆದರೆ ನನಗೆ ನೀಡಲಾಗಿರುವುದು, ಅಲ್ಲಾಹು ನನಗೆ ಅವತೀರ್ಣಗೊಳಿಸಿದ ದಿವ್ಯವಾಣಿಯಾಗಿದೆ (ಕುರ್‌ಆನ್). ಆದಕಾರಣ, ಪುನರುತ್ಥಾನ ದಿನದಂದು ಅವರ ಪೈಕಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವನು ನಾನಾಗಬೇಕು ಎಂದು ನಾನು ಆಶಿಸುತ್ತೇನೆ".
ಸಹೀಹ್ ಬುಖಾರಿ ಮತ್ತು ಮುಸ್ಲಿಂ.