عربي - Arabic English Qafár af - Afar Afrikaans - Afrikanns Akan Shqip - Albanian አማርኛ - Amharic Հայերեն - Armenian অসমীয়া - Assamese Azərbaycanca - Azerbaijani Bamanankan - Bambara Bassa Bemba বাংলা - Bengali Bosanski - Bosnian Български - Bulgarian မြန်မာဘာသာ - Burmese Bisaya - Cebuano Cham Нохчий - Chechen chiCheŵa - Chewa 中文 - Chinese Адыгэбзэ - Circassian Hrvatski - Croatian Česky - Czech Dagbani Dansk - Danish فارسی دری - Dari Dendi ދިވެހި ބަސް - Dhivehi Nederlands - Dutch إستوني - Estonian Suomi - Finnish Français - French Fulfulde - Fula ქართული - Georgian Deutsch - German Ελληνικά - Greek ગુજરાતી - Gujrati Kreyòl ayisyen - Haitian Creole Hausa हिन्दी - Hindi Magyar - Hungarian Igbo Indonesia - Indonesian Italiano - Italian 日本語 - Japanese Jóola - Jola ಕನ್ನಡ - Kannada Қазақша - Kazakh ភាសាខ្មែរ - Khmer Kikuyu Ikinyarwanda - Kinyarwanda Ikirundi - Kirundi 한국어 - Korean كوردی سۆرانی - kurdish كوردي kurmancî - Kurmanji Kyrgyz ລາວ - Lao latviešu - Latvian Lingala lietuvių - Lithuanian Luganda Македонски - Macedonian Maguindanaon Malagasy - Malagasy Bahasa Melayu - Malay മലയാളം - Malayalam Mandinka मराठी - Marathi Mõõré - Moore नेपाली - Nepali أنكو - NKo Norwegian ଓଡ଼ିଆ - Odia oromoo - Oromo پښتو - Pashto فارسی - Persian Polski - Polish Portuguese ਪੰਜਾਬੀ - Punjabi Română - Romanian Русский - Russian Српски - Serbian Shona සිංහල - Sinhala Slovenščina - Slovenian Soomaaliga - Somali Soninke Sesotho - Sotho Español - Spanish Kiswahili - Swahili Svenska - Swedish Tagalog Тоҷикӣ - Tajik தமிழ் - Tamil తెలుగు - Telugu ไทย - Thai ትግረኛ - Tigrinya Türkçe - Turkish Ukrainian اردو - Urdu ئۇيغۇرچە - Uyghur Ўзбек - Uzbek Việt Nam - Vietnamese Wolof Yao Yorùbá - Yoruba Zarma زولو - Zulu
839 ಹದೀಸ್‌ಗಳು
ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ
ವರ್ಗಗಳು
ಹದೀಸ್ನ ದರ್ಜೆ
ವರದಿಯಾದ ಗ್ರಂಥ
ವರದಿಗಾರ
ಎಲ್ಲಾ ವರದಿಗಾರರನ್ನು ತೋರಿಸಿ (21)
"ನಾಲ್ಕು (ಗುಣಲಕ್ಷಣಗಳು) ಯಾರಲ್ಲಿವೆಯೋ ಅವನು ಮುನಾಫಿಕ್ (ಕಪಟವಿಶ್ವಾಸಿ) ಆಗಿರುತ್ತಾನೆ. ಅವುಗಳಲ್ಲಿ ಒಂದು ಗುಣಲಕ್ಷಣವು ಯಾರಲ್ಲಿರುತ್ತದೆಯೋ, ಅವನು ಅದನ್ನು ಬಿಡುವವರೆಗೆ ಅವನಲ್ಲಿ 'ನಿಫಾಖ್' (ಕಪಟತನ) ದ ಒಂದು ಗುಣಲಕ್ಷಣವಿರುತ್ತದೆ: ಅವನು ಮಾತನಾಡಿದಾಗ ಸುಳ್ಳು ಹೇಳುತ್ತಾನೆ. ಅವನು ವಾಗ್ದಾನ ಮಾಡಿದಾಗ ಅದನ್ನು ಮುರಿಯುತ್ತಾನೆ. ಅವನು ಜಗಳವಾಡಿದಾಗ ಕೆಟ್ಟದಾಗಿ ವರ್ತಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡಾಗ ದ್ರೋಹ ಬಗೆಯುತ್ತಾನೆ".
ಸಹೀಹ್ ಇದನ್ನು ಬುಖಾರಿ ಮತ್ತು ಮುಸ್ಲಿಂ ವರದಿ ಮಾಡಿದ್ದಾರೆ.
ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಯಾರು ಅಮಾನತ್ (ವಿಶ್ವಾಸ, ನಂಬಿಕೆ) ನ ಮೇಲೆ ಆಣೆ ಮಾಡುತ್ತಾರೋ ಅವರು ನಮ್ಮವರಲ್ಲ."
ಸಹೀಹ್ ಇದನ್ನು ಅಬೂದಾವೂದ್ ಮತ್ತು ಅಹ್ಮದ್ ವರದಿ ಮಾಡಿದ್ದಾರೆ.
ಮುಆದ್ ಬಿನ್ ಜಬಲ್‌ರನ್ನು ಯಮನ್‌ಗೆ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ. ಅವರು ನಿಮ್ಮ ಮಾತನ್ನು ಅನುಸರಿಸಿದರೆ, ಅಲ್ಲಾಹು ಅವರ ಮೇಲೆ ಹಗಲು ರಾತ್ರಿಯಲ್ಲಿ ಐದು ನಮಾಝ್‌ಗಳನ್ನು ಕಡ್ಡಾಯಗೊಳಿಸಿದ್ದಾನೆಂದು ತಿಳಿಸಿರಿ. ಅವರು ಅದನ್ನೂ ಅನುಸರಿಸಿದರೆ, ಅಲ್ಲಾಹನು ಅವರ ಮೇಲೆ ಝಕಾತನ್ನು ಕಡ್ಡಾಯಗೊಳಿಸಿದ್ದಾನೆಂದು ಹೇಳಿರಿ. ಅದು ಅವರಲ್ಲಿರುವ ಶ್ರೀಮಂತರಿಂದ ತೆಗೆದು ಅವರಲ್ಲಿರುವ ಬಡವರಿಗೆ ನೀಡಲಾಗುತ್ತದೆ. ಅವರು ಅದನ್ನೂ ಅನುಸರಿಸಿದರೆ, ಅವರ ಅತ್ಯುತ್ತಮ ಸಂಪತ್ತಿನ ಬಗ್ಗೆ ಎಚ್ಚರ ವಹಿಸಿರಿ. (ಅದನ್ನು ವಶಪಡಿಸಬೇಡಿ). ಅನ್ಯಾಯಕ್ಕೊಳಗಾದವನ ಪ್ರಾರ್ಥನೆಯನ್ನು ಭಯಪಡಿರಿ. ಏಕೆಂದರೆ ಅದರ ಮತ್ತು ಅಲ್ಲಾಹನ ನಡುವೆ ಯಾವುದೇ ಪರದೆ ಇರುವುದಿಲ್ಲ.”
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಮನುಷ್ಯರಲ್ಲಿರುವ ಎರಡು ಗುಣಗಳು ಅವರಲ್ಲಿರುವ ಸತ್ಯನಿಷೇಧದ ಲಕ್ಷಣವಾಗಿವೆ. ವಂಶವನ್ನು ಟೀಕಿಸುವುದು ಮತ್ತು ಮೃತವ್ಯಕ್ತಿಗಾಗಿ ರೋದಿಸುವುದು."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ. ಆದರೆ ಸತ್ಯನಿಷೇಧಿಯು ಇಹಲೋಕದಲ್ಲಿ ಅಲ್ಲಾಹನ ಸಂಪ್ರೀತಿಗಾಗಿ ಮಾಡಿದ ಒಳಿತುಗಳಿಗಾಗಿ ಅವನಿಗೆ ಆಹಾರವನ್ನು ನೀಡಲಾಗುವುದು. ಹೀಗೆ ಅವನು ಪರಲೋಕಕ್ಕೆ ತಲುಪಿದಾಗ, ಪ್ರತಿಫಲ ನೀಡಲಾಗುವ ಯಾವುದೇ ಒಳಿತುಗಳು ಅವನಲ್ಲಿ ಉಳಿದಿರುವುದಿಲ್ಲ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."
ಸಹೀಹ್ ಬುಖಾರಿ ಮತ್ತು ಮುಸ್ಲಿಂ.
"ಕಪಟ ವಿಶ್ವಾಸಿಯ ಉದಾಹರಣೆಯು ಎರಡು ಕುರಿಮಂದೆಯ ನಡುವೆಯಿರುವ ಒಂದು ಕುರಿಯಂತಿದೆ. ಅದು ಒಮ್ಮೆ ಈ ಮಂದೆಗೂ ಇನ್ನೊಮ್ಮೆ ಈ ಮಂದೆಗೂ ಚಲಿಸುತ್ತದೆ."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.