Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 5 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ

ಹದೀಸ್‌ನ ದರ್ಜೆ

"ಒಂದು ವೇಳೆ ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟಿದ್ದರೆ, ಅವನು ಹಕ್ಕಿಗಳಿಗೆ ಜೀವನೋಪಾಯವನ್ನು ನೀಡಿದಂತೆ, ನಿಮಗೂ ಜೀವನೋಪಾಯವನ್ನು ನೀಡುವನು. ಅವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹೊರಡುತ್ತವೆ ಮತ್ತು ಸಂಜೆ ಹೊಟ್ಟೆ ತುಂಬಿಕೊಂಡು ಹಿಂತಿರುಗುತ್ತವೆ".
ಸಹೀಹ್ ಇದನ್ನು ಇಮಾಂ ಅಹ್ಮದ್, ತಿರ್ಮಿದಿ, ನಸಾಈ, ಇಬ್ನ್ ಮಾಜ, ಇಬ್ನ್ ಹಿಬ್ಬಾನ್ (ತಮ್ಮ ಸಹೀಹ್‌ನಲ್ಲಿ) ಮತ್ತು ಹಾಕಿಂ ವರದಿ ಮಾಡಿದ್ದಾರೆ.
"ನಿನ್ನ ನಾಲಿಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ (ಹಸಿಯಾಗಿರಲಿ)".
ಸಹೀಹ್ ಇದನ್ನು ಅಹ್ಮದ್, ತಿರ್ಮಿದಿ, ಇಬ್ನ್ ಮಾಜ ಮತ್ತು ಇಬ್ನ್ ಹಿಬ್ಬಾನ್ ವರದಿ ಮಾಡಿದ್ದಾರೆ.
"ನಿಶ್ಚಯವಾಗಿಯೂ ತಾನು ಕಡ್ಡಾಯಗೊಳಿಸಿದ ಕಾರ್ಯಗಳನ್ನು (ದಾಸರು) ನಿರ್ವಹಿಸುವುದನ್ನು ಅಲ್ಲಾಹು ಇಷ್ಟಪಡುವಂತೆಯೇ ತಾನು ರಿಯಾಯಿತಿ ನೀಡಿದ ಕಾರ್ಯಗಳನ್ನು (ದಾಸರು) ಸ್ವೀಕರಿಸುವುದನ್ನು ಅವನು ಇಷ್ಟಪಡುತ್ತಾನೆ."
ಸಹೀಹ್ ಇದನ್ನು ಇಬ್ನ್ ಹಿಬ್ಬಾನ್ ವರದಿ ಮಾಡಿದ್ದಾರೆ.
"ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ. ಜನರಲ್ಲಿ ಎರಡು ವಿಧಗಳಿವೆ: ಅಲ್ಲಾಹನ ಗೌರವಕ್ಕೆ ಪಾತ್ರರಾದ ಧರ್ಮನಿಷ್ಠ, ನೀತಿವಂತ ಜನರು ಮತ್ತು ಅಲ್ಲಾಹು ತುಚ್ಛವಾಗಿ ಪರಿಗಣಿಸುವ ಕೆಟ್ಟ, ನತದೃಷ್ಟ ಜನರು. ಮನುಷ್ಯರೆಲ್ಲರೂ ಆದಮರ ಮಕ್ಕಳು. ಅಲ್ಲಾಹು ಆದಮರನ್ನು ಮಣ್ಣಿನಿಂದ ಸೃಷ್ಟಿಸಿದನು. ಅಲ್ಲಾಹು ಹೇಳುತ್ತಾನೆ: "ಜನರೇ! ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಂದು ಗಂಡು ಮತ್ತು ಒಂದು ಹೆಣ್ಣಿನಿಂದ ಸೃಷ್ಟಿಸಿದ್ದೇವೆ. ನೀವು ಪರಸ್ಪರ ಗುರುತಿಸುವುದಕ್ಕಾಗಿ ನಾವು ನಿಮ್ಮನ್ನು ವಿಭಿನ್ನ ಜನಾಂಗ ಮತ್ತು ಗೋತ್ರಗಳನ್ನಾಗಿ ಮಾಡಿದೆವು. ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯಧಿಕ ದೇವಭಯವುಳ್ಳವನು ಯಾರೋ ಅವನೇ ಅಲ್ಲಾಹನ ದೃಷ್ಟಿಯಲ್ಲಿ ಅತ್ಯಂತ ಗೌರವಾನ್ವಿತನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸೂಕ್ಷ್ಮ ಜ್ಞಾನಿಯಾಗಿದ್ದಾನೆ." [ಹುಜುರಾತ್ 13]."
ಸಹೀಹ್ ಇದನ್ನು ತಿರ್ಮಿದಿ ಮತ್ತು ಇಬ್ನ್ ಹಿಬ್ಬಾನ್ ವರದಿ ಮಾಡಿದ್ದಾರೆ.
"ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್‌ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್‌ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅದರ ರುಕೂ ಮತ್ತು ಸುಜೂದ್‌ಗಳನ್ನು ಪೂರ್ಣಗೊಳಿಸದಿರುವುದು."
ಸಹೀಹ್ ಇದನ್ನು ಇಬ್ನ್ ಹಿಬ್ಬಾನ್ ವರದಿ ಮಾಡಿದ್ದಾರೆ.