11 : 66
فَلَمَّا جَآءَ أَمۡرُنَا نَجَّيۡنَا صَٰلِحٗا وَٱلَّذِينَ ءَامَنُواْ مَعَهُۥ بِرَحۡمَةٖ مِّنَّا وَمِنۡ خِزۡيِ يَوۡمِئِذٍۚ إِنَّ رَبَّكَ هُوَ ٱلۡقَوِيُّ ٱلۡعَزِيزُ
ನಂತರ ನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಸ್ವಾಲಿಹ್ ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ದಿನದ ಅವಮಾನದಿಂದಲೂ ಅವರನ್ನು ರಕ್ಷಿಸಿದೆವು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.