Skip to content
ಸೂರಗಳ ಪಟ್ಟಿ /

يُوسُف

يُوسُف is chapter 12 of the Quran and has 111 verses. This page presents it in full in the Uthmani script, with a verse-by-verse translation of its meaning.

111 ಆಯತ್‌ಗಳು ಸೂರ ಸಂಖ್ಯೆ 12
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

الٓرۚ تِلۡكَ ءَايَٰتُ ٱلۡكِتَٰبِ ٱلۡمُبِينِ

ಅಲಿಫ್. ಲಾಮ್. ರಾ. ಇವು ಸ್ಪಷ್ಟ ಗ್ರಂಥದ ವಚನಗಳಾಗಿವೆ.

إِنَّآ أَنزَلۡنَٰهُ قُرۡءَٰنًا عَرَبِيّٗا لَّعَلَّكُمۡ تَعۡقِلُونَ

ನಿಶ್ಚಯವಾಗಿಯೂ ನಾವು ಇದನ್ನು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್ ಆಗಿ ಅವತೀರ್ಣಗೊಳಿಸಿದ್ದೇವೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ.

نَحۡنُ نَقُصُّ عَلَيۡكَ أَحۡسَنَ ٱلۡقَصَصِ بِمَآ أَوۡحَيۡنَآ إِلَيۡكَ هَٰذَا ٱلۡقُرۡءَانَ وَإِن كُنتَ مِن قَبۡلِهِۦ لَمِنَ ٱلۡغَٰفِلِينَ

ನಾವು ಈ ಕುರ್‌ಆನನ್ನು ದೇವವಾಣಿಯ ಮೂಲಕ ನಿಮಗೆ ಅವತೀರ್ಣಗೊಳಿಸಿರುವುದರಿಂದ, ನಿಮಗೆ ಇದರಲ್ಲಿ ಒಂದು ಅತ್ಯುತ್ತಮ ಕಥೆಯನ್ನು ನಿರೂಪಿಸುವೆವು. ಇದಕ್ಕೆ ಮೊದಲು ನಿಮಗೆ ಇದರ ಬಗ್ಗೆ ತಿಳಿದೇ ಇರಲಿಲ್ಲ.

إِذۡ قَالَ يُوسُفُ لِأَبِيهِ يَٰٓأَبَتِ إِنِّي رَأَيۡتُ أَحَدَ عَشَرَ كَوۡكَبٗا وَٱلشَّمۡسَ وَٱلۡقَمَرَ رَأَيۡتُهُمۡ لِي سَٰجِدِينَ

ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭ: “ಅಪ್ಪಾ! ಖಂಡಿತವಾಗಿಯೂ ನಾನು (ಕನಸಿನಲ್ಲಿ) ಹನ್ನೊಂದು ನಕ್ಷತ್ರಗಳನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಕಂಡಿದ್ದೇನೆ. ಅವು ನನಗೆ ಸಾಷ್ಟಾಂಗ ಮಾಡುವುದನ್ನು ಕಂಡಿದ್ದೇನೆ.”

Explanation & meanings · 1
  1. ಹನ್ನೊಂದು ನಕ್ಷತ್ರಗಳು ಎಂದರೆ ಯೂಸುಫರ (ಅವರ ಮೇಲೆ ಶಾಂತಿಯಿರಲಿ) ಹನ್ನೊಂದು ಸಹೋದರರು. ಸೂರ್ಯ ಎಂದರೆ ತಂದೆ (ಯಾಕೂಬ್) ಮತ್ತು ಚಂದ್ರ ಎಂದರೆ ತಾಯಿ.

قَالَ يَٰبُنَيَّ لَا تَقۡصُصۡ رُءۡيَاكَ عَلَىٰٓ إِخۡوَتِكَ فَيَكِيدُواْ لَكَ كَيۡدًاۖ إِنَّ ٱلشَّيۡطَٰنَ لِلۡإِنسَٰنِ عَدُوّٞ مُّبِينٞ

ತಂದೆ ಹೇಳಿದರು: “ಮಗೂ! ನಿನ್ನ ಕನಸನ್ನು ನಿನ್ನ ಸಹೋದರರಿಗೆ ತಿಳಿಸಬೇಡ. ಹಾಗೇನಾದರೂ ಆದರೆ ಅವರು ನಿನ್ನ ವಿರುದ್ಧ ಪಿತೂರಿ ಮಾಡುವರು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.