12 : 18
وَجَآءُو عَلَىٰ قَمِيصِهِۦ بِدَمٖ كَذِبٖۚ قَالَ بَلۡ سَوَّلَتۡ لَكُمۡ أَنفُسُكُمۡ أَمۡرٗاۖ فَصَبۡرٞ جَمِيلٞۖ وَٱللَّهُ ٱلۡمُسۡتَعَانُ عَلَىٰ مَا تَصِفُونَ
ಅವರು ಯೂಸುಫರ ಅಂಗಿಗೆ ನಕಲಿ ರಕ್ತವನ್ನು ಹಚ್ಚಿ ತಂದರು. ತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ನೀವು ವರ್ಣಿಸಿ ಹೇಳುವ ಈ ವಿಷಯದಲ್ಲಿ ನಾನು ಅಲ್ಲಾಹನಲ್ಲಿ ಮಾತ್ರ ಸಹಾಯ ಬೇಡುತ್ತೇನೆ.”
Explanation & meanings · 1
- ಅವರೊಂದು ಕುರಿಯನ್ನು ಕೊಯ್ದು ಅದರ ರಕ್ತವನ್ನು ಯೂಸುಫರ ಬಟ್ಟೆಗೆ ಹಚ್ಚಿದರು. ಆದರೆ ಅಂಗಿಯನ್ನು ತೋಳ ತಿಂದ ರೀತಿಯಲ್ಲಿ ಹರಿಯಲು ಅವರು ಮರೆತು ಬಿಟ್ಟಿದ್ದರು.