Skip to content
يُوسُف /

ಆಯತ್ 21

12 : 21

ಆಯತ್ 21 of يُوسُف (12 : 21). This page carries the verse in the Uthmani script with a translation of its meaning, at a stable URL that can be cited on its own.

يُوسُف ಆಯತ್‌ಗಳು 111
ಸೂರ · يُوسُف
ಕನ್ನಡ · Hamza
12 : 21

وَقَالَ ٱلَّذِي ٱشۡتَرَىٰهُ مِن مِّصۡرَ لِٱمۡرَأَتِهِۦٓ أَكۡرِمِي مَثۡوَىٰهُ عَسَىٰٓ أَن يَنفَعَنَآ أَوۡ نَتَّخِذَهُۥ وَلَدٗاۚ وَكَذَٰلِكَ مَكَّنَّا لِيُوسُفَ فِي ٱلۡأَرۡضِ وَلِنُعَلِّمَهُۥ مِن تَأۡوِيلِ ٱلۡأَحَادِيثِۚ وَٱللَّهُ غَالِبٌ عَلَىٰٓ أَمۡرِهِۦ وَلَٰكِنَّ أَكۡثَرَ ٱلنَّاسِ لَا يَعۡلَمُونَ

ಈಜಿಪ್ಟಿನಲ್ಲಿ ಅವರನ್ನು ಖರೀದಿಸಿದ ವ್ಯಕ್ತಿ ತನ್ನ ಪತ್ನಿಯೊಂದಿಗೆ ಹೇಳಿದನು: “ಇವನೊಡನೆ ಗೌರವದಿಂದ ವರ್ತಿಸು. ಇವನಿಂದ ನಮಗೆ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಮಗನಾಗಿ ಸ್ವೀಕರಿಸಿಕೊಳ್ಳಬಹುದು.” ಈ ರೀತಿ ನಾವು ಯೂಸುಫರಿಗೆ (ಈಜಿಪ್ಟಿನ) ಭೂಮಿಯಲ್ಲಿ ನೆಲೆಯನ್ನು ಮಾಡಿಕೊಟ್ಟೆವು. ಅವರಿಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸಿಕೊಡುವುದಕ್ಕಾಗಿ. ಅಲ್ಲಾಹು ತನ್ನ ಎಲ್ಲಾ ವ್ಯವಹಾರಗಳಲ್ಲಿ ಅಜೇಯನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

Explanation & meanings · 1
  1. ಆ ಕಾಲದಲ್ಲಿ ರಯಾನ್ ಬಿನ್ ವಲೀದ್ ಎಂಬಾತ ಈಜಿಪ್ಟಿನ ಅರಸನಾಗಿದ್ದ ಮತ್ತು ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ಖರೀದಿಸಿದ ವ್ಯಕ್ತಿ ಆತನ ಮಂತ್ರಿಯಾಗಿದ್ದ. ಅಝೀಝ್ ಎಂಬುದು ಈತನ ಬಿರುದಾಗಿತ್ತು. ಈತನ ಪತ್ನಿಯ ಹೆಸರು ರಾಈಲ್ ಅಥವಾ ಝಲೀಖಾ ಎಂದು ಹೇಳಲಾಗುತ್ತದೆ.