Skip to content
الرَّعد /

ಆಯತ್ 17

13 : 17

ಆಯತ್ 17 of الرَّعد (13 : 17). This page carries the verse in the Uthmani script with a translation of its meaning, at a stable URL that can be cited on its own.

الرَّعد ಆಯತ್‌ಗಳು 43
ಸೂರ · الرَّعد
ಕನ್ನಡ · Hamza
13 : 17

أَنزَلَ مِنَ ٱلسَّمَآءِ مَآءٗ فَسَالَتۡ أَوۡدِيَةُۢ بِقَدَرِهَا فَٱحۡتَمَلَ ٱلسَّيۡلُ زَبَدٗا رَّابِيٗاۖ وَمِمَّا يُوقِدُونَ عَلَيۡهِ فِي ٱلنَّارِ ٱبۡتِغَآءَ حِلۡيَةٍ أَوۡ مَتَٰعٖ زَبَدٞ مِّثۡلُهُۥۚ كَذَٰلِكَ يَضۡرِبُ ٱللَّهُ ٱلۡحَقَّ وَٱلۡبَٰطِلَۚ فَأَمَّا ٱلزَّبَدُ فَيَذۡهَبُ جُفَآءٗۖ وَأَمَّا مَا يَنفَعُ ٱلنَّاسَ فَيَمۡكُثُ فِي ٱلۡأَرۡضِۚ كَذَٰلِكَ يَضۡرِبُ ٱللَّهُ ٱلۡأَمۡثَالَ

ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಕಣಿವೆಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ತುಂಬಿ ಹರಿದವು. ಆಗ ನೀರಿನ ಮೇಲಕ್ಕೆದ್ದು ಬರುವ ನೊರೆಗಳನ್ನು ಪ್ರವಾಹವು ಹೊತ್ತು ಹರಿಯುತ್ತದೆ. ಅವರು ಆಭರಣಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಬೆಂಕಿಗೆ ಹಾಕಿ ಕಾಯಿಸುವ ಲೋಹಗಳಿಂದಲೂ ಇದರಂತಹ ನೊರೆಗಳು ಬರುತ್ತವೆ. ಈ ರೀತಿಯಲ್ಲಿ ಅಲ್ಲಾಹು ಸತ್ಯ ಮತ್ತು ಅಸತ್ಯಕ್ಕೆ ಉದಾಹರಣೆ ಕೊಡುತ್ತಾನೆ. ನೊರೆಗಳು ಆರಿ ಮಾಯವಾಗುತ್ತವೆ. ಮನುಷ್ಯರಿಗೆ ಉಪಕಾರವಾಗುವ ವಿಷಯಗಳು ಭೂಮಿಯಲ್ಲಿ ಸ್ಥಿರವಾಗಿ ನಿಲ್ಲುತ್ತವೆ. ಈ ರೀತಿ ಅಲ್ಲಾಹು ಉದಾರಹಣೆಗಳನ್ನು ತಿಳಿಸುತ್ತಾನೆ.

Explanation & meanings · 1
  1. ನೀರು ಹರಿಯುವಾಗ ಅದರ ಮೇಲೆ ನೊರೆಗಳು ಉಂಟಾಗುತ್ತವೆ. ಈ ನೊರೆಗಳು ಶಾಶ್ವತವಾಗಿ ಉಳಿಯುವುದಿಲ್ಲ. ಹಾಗೆಯೇ ಆಭರಣಗಳನ್ನು ತಯಾರಿಸಲು ಚಿನ್ನ-ಬೆಳ್ಳಿಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಹಿತ್ತಾಳೆ-ಕಂಚುಗಳನ್ನು ಕಾಯಿಸುವಾಗ ಅವುಗಳಿಂದಲೂ ನೊರೆಗಳು ಏಳುತ್ತವೆ. ಇವು ಕೂಡ ಶಾಶ್ವತವಾಗಿ ಉಳಿಯುವುದಿಲ್ಲ. ಇವುಗಳಿಂದ ಮನುಷ್ಯರಿಗೆ ಪ್ರಯೋಜನವೂ ಇಲ್ಲ. ಆದರೆ ನೀರು, ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಮೊದಲಾದವುಗಳು ಬಾಕಿಯುಳಿಯುತ್ತವೆ ಮತ್ತು ಅವರು ಮನುಷ್ಯರಿಗೆ ಪ್ರಯೋಜನಕಾರಿಯಾಗಿವೆ. ಅಸತ್ಯವು ನೊರೆಯಂತೆ, ಅದು ಶಾಶ್ವತವಾಗಿ ಉಳಿಯುವುದಿಲ್ಲ. ಸತ್ಯವು ನೀರು, ಚಿನ್ನ, ಬೆಳ್ಳಿ ಮುಂತಾದವುಗಳಂತೆ, ಅವು ಶಾಶ್ವತವಾಗಿ ಉಳಿಯುತ್ತವೆ ಮತ್ತು ಅವುಗಳಿಂದ ಮನುಷ್ಯರಿಗೆ ಪ್ರಯೋಜನಗಳಿವೆ.