وَلَوۡ أَنَّ قُرۡءَانٗا سُيِّرَتۡ بِهِ ٱلۡجِبَالُ أَوۡ قُطِّعَتۡ بِهِ ٱلۡأَرۡضُ أَوۡ كُلِّمَ بِهِ ٱلۡمَوۡتَىٰۗ بَل لِّلَّهِ ٱلۡأَمۡرُ جَمِيعًاۗ أَفَلَمۡ يَاْيۡـَٔسِ ٱلَّذِينَ ءَامَنُوٓاْ أَن لَّوۡ يَشَآءُ ٱللَّهُ لَهَدَى ٱلنَّاسَ جَمِيعٗاۗ وَلَا يَزَالُ ٱلَّذِينَ كَفَرُواْ تُصِيبُهُم بِمَا صَنَعُواْ قَارِعَةٌ أَوۡ تَحُلُّ قَرِيبٗا مِّن دَارِهِمۡ حَتَّىٰ يَأۡتِيَ وَعۡدُ ٱللَّهِۚ إِنَّ ٱللَّهَ لَا يُخۡلِفُ ٱلۡمِيعَادَ
ಯಾವುದೇ ಕುರ್‌ಆನಿನ (ದೈವಿಕ ಗ್ರಂಥದ) ಮೂಲಕ ಬೆಟ್ಟಗಳನ್ನು ಚಲಿಸುವಂತೆ, ಭೂಮಿ ನುಚ್ಚುನೂರಾಗುವಂತೆ, ಅಥವಾ ಸತ್ತವನು ಮಾತನಾಡುವಂತೆ ಮಾಡಲಾದರೂ (ಅವರು ಸತ್ಯವಿಶ್ವಾಸಿಗಳಾಗಲಾರರು). ವಾಸ್ತವವಾಗಿ, ಎಲ್ಲವೂ ಅಲ್ಲಾಹನ ನಿಯಂತ್ರಣದಲ್ಲಿವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಮನುಷ್ಯರೆಲ್ಲರನ್ನೂ ಅವನು ಸನ್ಮಾರ್ಗದಲ್ಲಿ ಸೇರಿಸುತ್ತಿದ್ದನೆಂದು ಸತ್ಯವಿಶ್ವಾಸಿಗಳಿಗೆ ತಿಳಿದಿಲ್ಲವೇ? ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ನಿಮಿತ್ತ ಯಾವುದಾದರೂ ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ. ಅಥವಾ ಅವರ ಮನೆಗಳ ಸಮೀಪವೇ ಅದು ಎರಗಬಹುದು. ಎಲ್ಲಿಯವರೆಗೆಂದರೆ, ಅಲ್ಲಾಹನ ವಾಗ್ದಾನವು ಬರುವ ತನಕ. ನಿಶ್ಚಯವಾಗಿಯೂ ಅಲ್ಲಾಹು ವಾಗ್ದಾನಗಳನ್ನು ಉಲ್ಲಂಘಿಸುವುದಿಲ್ಲ.