Skip to content
الرَّعد /

ಆಯತ್ 33

13 : 33

ಆಯತ್ 33 of الرَّعد (13 : 33). This page carries the verse in the Uthmani script with a translation of its meaning, at a stable URL that can be cited on its own.

الرَّعد ಆಯತ್‌ಗಳು 43
ಸೂರ · الرَّعد
ಕನ್ನಡ · Hamza
13 : 33

أَفَمَنۡ هُوَ قَآئِمٌ عَلَىٰ كُلِّ نَفۡسِۭ بِمَا كَسَبَتۡۗ وَجَعَلُواْ لِلَّهِ شُرَكَآءَ قُلۡ سَمُّوهُمۡۚ أَمۡ تُنَبِّـُٔونَهُۥ بِمَا لَا يَعۡلَمُ فِي ٱلۡأَرۡضِ أَم بِظَٰهِرٖ مِّنَ ٱلۡقَوۡلِۗ بَلۡ زُيِّنَ لِلَّذِينَ كَفَرُواْ مَكۡرُهُمۡ وَصُدُّواْ عَنِ ٱلسَّبِيلِۗ وَمَن يُضۡلِلِ ٱللَّهُ فَمَا لَهُۥ مِنۡ هَادٖ

ಪ್ರತಿಯೊಬ್ಬ ಮನುಷ್ಯನು ಮಾಡಿದ ಕರ್ಮಗಳ ಮೇಲ್ನೋಟ ವಹಿಸುವ ಅಲ್ಲಾಹು (ಏನೂ ತಿಳಿಯದವನೇ?) ಅವರು (ಇತರ ದೇವರುಗಳನ್ನು) ಅಲ್ಲಾಹನಿಗೆ ಸಹಭಾಗಿಗಳಾಗಿ ಮಾಡಿದರು. ಹೇಳಿರಿ: “ಅವರ ಹೆಸರನ್ನು ಹೇಳಿರಿ. ಭೂಮಿಯಲ್ಲಿ ಅಲ್ಲಾಹನಿಗೆ ತಿಳಿಯದಿರುವ ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ? ಅಥವಾ ನೀವು ಕೇವಲ ಊಹಿಸಿ ಹಾಗೆ ಹೇಳುತ್ತಿದ್ದೀರಾ?” ಅಲ್ಲ, ವಾಸ್ತವವಾಗಿ ಸತ್ಯನಿಷೇಧಿಗಳಿಗೆ ಅವರ ತಂತ್ರಗಳನ್ನು ಆಕರ್ಷಕವಾಗಿ ತೋರಿಸಲಾಗಿದೆ ಮತ್ತು ಅವರನ್ನು ಸತ್ಯಮಾರ್ಗದಿಂದ ತಡೆಯಲಾಗಿದೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ.

Explanation & meanings · 1
  1. ಅಂದರೆ ಅಲ್ಲಾಹನ ಹೊರತು ಬೇರೆ ದೇವರುಗಳಿದ್ದಾರೆಂಬ ವಿಷಯ ಅಲ್ಲಾಹನಿಗೆ ತಿಳಿದಿಲ್ಲ. ನೀವು ಆರಾಧಿಸುತ್ತಿರುವ ವಿಗ್ರಹಗಳು ದೇವರುಗಳೆಂಬುದಕ್ಕೆ ಯಾವುದೇ ಆಧಾರವಿಲ್ಲ. ನೀವು ಹೇಳುತ್ತಿರುವ ನಿಮ್ಮ ದೇವರುಗಳ ಹೆಸರುಗಳನ್ನು ಅಲ್ಲಾಹು ಅವನ ಗ್ರಂಥಗಳಲ್ಲಿ ಅವತೀರ್ಣಗೊಳಿಸಿಲ್ಲ. ಅವು ನೀವು ಮತ್ತು ಪೂರ್ವಜರು ಇಟ್ಟ ಹೆಸರುಗಳಾಗಿವೆ.