Skip to content
ಸೂರಗಳ ಪಟ್ಟಿ /

الإسرَاء

الإسرَاء is chapter 17 of the Quran and has 111 verses. This page presents it in full in the Uthmani script, with a verse-by-verse translation of its meaning.

111 ಆಯತ್‌ಗಳು ಸೂರ ಸಂಖ್ಯೆ 17
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

سُبۡحَٰنَ ٱلَّذِيٓ أَسۡرَىٰ بِعَبۡدِهِۦ لَيۡلٗا مِّنَ ٱلۡمَسۡجِدِ ٱلۡحَرَامِ إِلَى ٱلۡمَسۡجِدِ ٱلۡأَقۡصَا ٱلَّذِي بَٰرَكۡنَا حَوۡلَهُۥ لِنُرِيَهُۥ مِنۡ ءَايَٰتِنَآۚ إِنَّهُۥ هُوَ ٱلسَّمِيعُ ٱلۡبَصِيرُ

ತನ್ನ ದಾಸನನ್ನು (ಪ್ರವಾದಿಯನ್ನು) ಒಂದೇ ರಾತ್ರಿಯಲ್ಲಿ ಮಸ್ಜಿದ್ ಹರಾಮ್‌ನಿಂದ (ಮಕ್ಕಾ) ಮಸ್ಜಿದ್ ಅಕ್ಸಾಗೆ (ಜೆರೂಸಲೇಂ) ನಿಶಾಯಾನ ಮಾಡಿಸಿದವನು ಪರಮ ಪರಿಶುದ್ಧನು. ಅದರ (ಮಸ್ಜಿದ್ ಅಕ್ಸಾದ) ಪರಿಸರವನ್ನು ನಾವು ಸಮೃದ್ಧಗೊಳಿಸಿದ್ದೇವೆ. ಇದು ಅವರಿಗೆ ನಮ್ಮ ಕೆಲವು ದೃಷ್ಟಾಂತಗಳನ್ನು ತೋರಿಸಿಕೊಡುವುದಕ್ಕಾಗಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.

Explanation & meanings · 1
  1. ಅಲ್ಲಾಹು ಪ್ರವಾದಿ ಮುಹಮ್ಮದರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದೇ ರಾತ್ರಿಯಲ್ಲಿ ಮಕ್ಕಾದಿಂದ ಪ್ಯಾಲಸ್ತೀನ್‍ನಲ್ಲಿರುವ ಮಸ್ಜಿದುಲ್ ಅಕ್ಸಾ (ಬೈತುಲ್ ಮುಕದ್ದಿಸ್)ಗೆ, ನಂತರ ಅಲ್ಲಿಂದ ಆಕಾಶಗಳಿಗೆ ಒಯ್ದು, ಬಳಿಕ ಮಕ್ಕಾಗೆ ಮರಳಿಸಿದನು. ಇದೊಂದು ಅಸಾಮಾನ್ಯ ಘಟನೆಯಾಗಿತ್ತು. ಮಸ್ಜಿದುಲ್ ಅಕ್ಸಾದ ವರೆಗಿನ ನಿಶಾಯಾತ್ರೆಯನ್ನು ‘ಇಸ್ರಾ’ ಮತ್ತು ನಂತರ ಜರುಗಿದ ಆಕಾಶಾರೋಹಣವನ್ನು ‘ಮಿಅ‌ರಾಜ್’ ಎಂದು ಕರೆಯಲಾಗುತ್ತದೆ.

وَءَاتَيۡنَا مُوسَى ٱلۡكِتَٰبَ وَجَعَلۡنَٰهُ هُدٗى لِّبَنِيٓ إِسۡرَٰٓءِيلَ أَلَّا تَتَّخِذُواْ مِن دُونِي وَكِيلٗا

ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅದನ್ನು ನಾವು ಇಸ್ರಾಯೇಲ್ ಮಕ್ಕಳಿಗೆ ಸನ್ಮಾರ್ಗದರ್ಶಿಯಾಗಿ ಮಾಡಿದೆವು. “ನನ್ನನ್ನು ಬಿಟ್ಟು ಬೇರೆ ಯಾರನ್ನೂ ನೀವು ಕಾರ್ಯನಿರ್ವಾಹಕರನ್ನಾಗಿ ಸ್ವೀಕರಿಸಬೇಡಿ” ಎಂದು (ಅದರಲ್ಲಿ ಆದೇಶಿಸಲಾಗಿತ್ತು).

ذُرِّيَّةَ مَنۡ حَمَلۡنَا مَعَ نُوحٍۚ إِنَّهُۥ كَانَ عَبۡدٗا شَكُورٗا

ನಾವು ನೂಹರೊಡನೆ ನಾವೆಯಲ್ಲಿ ಒಯ್ದವರ ಸಂತತಿಗಳೇ! ನಿಶ್ಚಯವಾಗಿಯೂ ಅವರು (ನೂಹ್) ಅತ್ಯಂತ ಕೃತಜ್ಞ ದಾಸರಾಗಿದ್ದರು.

وَقَضَيۡنَآ إِلَىٰ بَنِيٓ إِسۡرَٰٓءِيلَ فِي ٱلۡكِتَٰبِ لَتُفۡسِدُنَّ فِي ٱلۡأَرۡضِ مَرَّتَيۡنِ وَلَتَعۡلُنَّ عُلُوّٗا كَبِيرٗا

ನಾವು ಗ್ರಂಥದಲ್ಲಿ ಇಸ್ರಾಯೇಲ್ ಮಕ್ಕಳಿಗೆ, “ನೀವು ಖಂಡಿತ ಭೂಮಿಯಲ್ಲಿ ಎರಡು ಬಾರಿ ಕಿಡಿಗೇಡಿತನ ಮಾಡುತ್ತೀರಿ ಮತ್ತು ಅತ್ಯಧಿಕ ದರ್ಪದಿಂದ ಮೆರೆಯುತ್ತೀರಿ” ಎಂದು ತೀರ್ಪು ನೀಡಿದೆವು.

فَإِذَا جَآءَ وَعۡدُ أُولَىٰهُمَا بَعَثۡنَا عَلَيۡكُمۡ عِبَادٗا لَّنَآ أُوْلِي بَأۡسٖ شَدِيدٖ فَجَاسُواْ خِلَٰلَ ٱلدِّيَارِۚ وَكَانَ وَعۡدٗا مَّفۡعُولٗا

ಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.

Explanation & meanings · 1
  1. ಕ್ರಿ.ಪೂ. 600 ರಲ್ಲಿ ಬಾಬಿಲೋನಿಯಾದ ಚಕ್ರವರ್ತಿ ಬುಖ್ತ್ ನಸರ್ (ನೆಬೂಕಡ್‌ನಝರ್) ಜೆರೂಸಲೇಂ ಮೇಲೆ ದಾಳಿ ಮಾಡಿ ಅಸಂಖ್ಯ ಯಹೂದಿಗಳನ್ನು ಕೊಂದು ಅಸಂಖ್ಯ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡ ಕಡೆಗೆ ಇಲ್ಲಿ ಸೂಚನೆ ನೀಡಲಾಗಿದೆ. ಇದು ಯಹೂದಿಗಳು ಅಲ್ಲಾಹನ ಪ್ರವಾದಿಗಳನ್ನು ಕೊಂದು ತೌರಾತನ್ನು ಬಹಿರಂಗವಾಗಿ ಉಲ್ಲಂಘಿಸಿ ವಿಕೃತಿ ಮೆರೆದ ಸಂದರ್ಭದಲ್ಲಾಗಿತ್ತು. ಬುಖ್ತ್ ನಸರ್ ಮಾತ್ರವಲ್ಲದೆ, ಜಾಲೂತ್ (ಗೋಲಿಯತ್) ನ ಕೈಯಲ್ಲೂ ಕೂಡ ಯಹೂದಿಗಳು ಬಗೆ ಬಗೆಯ ಹಿಂಸೆಗಳನ್ನು ಅನುಭವಿಸಿದ್ದರು. ನಂತರ ತಾಲೂತ್ (ಸೌಲ್) ರ ಕಾಲದಲ್ಲಿ ಪ್ರವಾದಿ ದಾವೂದ್ (ಅವರ ಮೇಲೆ ಶಾಂತಿಯಿರಲಿ) ಜಾಲೂತನನ್ನು ಜೆರೂಸಲೇಂ ಅನ್ನು ವಶಪಡಿಸಿದರು.