17 : 23
۞ وَقَضَىٰ رَبُّكَ أَلَّا تَعۡبُدُوٓاْ إِلَّآ إِيَّاهُ وَبِٱلۡوَٰلِدَيۡنِ إِحۡسَٰنًاۚ إِمَّا يَبۡلُغَنَّ عِندَكَ ٱلۡكِبَرَ أَحَدُهُمَآ أَوۡ كِلَاهُمَا فَلَا تَقُل لَّهُمَآ أُفّٖ وَلَا تَنۡهَرۡهُمَا وَقُل لَّهُمَا قَوۡلٗا كَرِيمٗا
ನೀವು ಅಲ್ಲಾಹನ ಹೊರತು ಬೇರೆ ಯಾರನ್ನೂ ಆರಾಧಿಸಬಾರದು ಮತ್ತು ಮಾತಾಪಿತರಿಗೆ ಒಳಿತು ಮಾಡಬೇಕು ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ಆದೇಶಿಸಿದ್ದಾನೆ. ಅವರಲ್ಲೊಬ್ಬರು ಅಥವಾ ಇಬ್ಬರೂ ನಿಮ್ಮ ಉಪಸ್ಥಿತಿಯಲ್ಲಿ ವೃದ್ಧಾಪ್ಯವನ್ನು ತಲುಪಿದ್ದರೆ ಅವರೊಡನೆ “ಛೇ” ಎಂದು ಹೇಳಬೇಡಿ. ಅವರನ್ನು ಗದರಿಸಬೇಡಿ. ಅವರೊಡನೆ ಗೌರವದಿಂದ ಮಾತನಾಡಿರಿ.