Skip to content
الإسرَاء /

ಆಯತ್ 7

17 : 7

ಆಯತ್ 7 of الإسرَاء (17 : 7). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 7

إِنۡ أَحۡسَنتُمۡ أَحۡسَنتُمۡ لِأَنفُسِكُمۡۖ وَإِنۡ أَسَأۡتُمۡ فَلَهَاۚ فَإِذَا جَآءَ وَعۡدُ ٱلۡأٓخِرَةِ لِيَسُـُٔواْ وُجُوهَكُمۡ وَلِيَدۡخُلُواْ ٱلۡمَسۡجِدَ كَمَا دَخَلُوهُ أَوَّلَ مَرَّةٖ وَلِيُتَبِّرُواْ مَا عَلَوۡاْ تَتۡبِيرًا

ನೀವು ಒಳಿತು ಮಾಡಿದರೆ ಅದು ನಿಮ್ಮ ಒಳಿತಿಗೇ ಆಗಿದೆ. ನೀವು ಕೆಡುಕು ಮಾಡಿದರೆ ಅದರ ಪರಿಣಾಮವನ್ನು ನೀವೇ ಅನುಭವಿಸುತ್ತೀರಿ. ಎರಡನೇ ವಾಗ್ದಾನದ ಸಮಯವು ಬಂದಾಗ, ನಿಮ್ಮ ಮುಖಗಳನ್ನು ವಿರೂಪಗೊಳಿಸಲು ಮತ್ತು ಅವರು ಪ್ರಥಮ ಬಾರಿ ಮಸೀದಿಯನ್ನು ಪ್ರವೇಶಿಸಿದಂತೆ ಎರಡನೇ ಬಾರಿಯೂ ಪ್ರವೇಶಿಸಲು ಹಾಗೂ ನಿಮ್ಮ ಅಧಿಕಾರದಲ್ಲಿರುವ ಎಲ್ಲವನ್ನೂ ಸರ್ವನಾಶ ಮಾಡಲು (ನಾವು ನಮ್ಮ ಬೇರೆ ದಾಸರನ್ನು ಕಳುಹಿಸಿದೆವು).

Explanation & meanings · 1
  1. ಯಹೂದಿಗಳು ಪ್ರವಾದಿ ಝಕರಿಯ್ಯಾರನ್ನು (ಅವರ ಮೇಲೆ ಶಾಂತಿಯಿರಲಿ) ಕೊಂದು ನಂತರ ಈಸಾರನ್ನು (ಯೇಸು — ಅವರ ಮೇಲೆ ಶಾಂತಿಯಿರಲಿ) ಕೂಡ ಕೊಲ್ಲಲು ಸಂಚು ನಡೆಸಿದರು. ಆದರೆ ಅಲ್ಲಾಹು ಅವರ ಕೈಯಿಂದ ಈಸಾರನ್ನು (ಅವರ ಮೇಲೆ ಶಾಂತಿಯಿರಲಿ) ರಕ್ಷಿಸಿದನು. ನಂತರ ಕ್ರಿ. ಶ. 70ರಲ್ಲಿ ಅಲ್ಲಾಹು ರೋಮನ್ ದೊರೆ ಟೈಟಸ್‌ನನ್ನು ಅವರ ವಿರುದ್ಧ ಕಳುಹಿಸಿದನು. ಅವನು ಜೆರೂಸಲೇಂಗೆ ದಾಳಿ ಮಾಡಿ ಯಹೂದಿಗಳ ಒಂದು ದೊಡ್ಡ ಸಂಖ್ಯೆಯನ್ನು ಕೊಂದು ಒಂದು ದೊಡ್ಡ ಸಂಖ್ಯೆಯನ್ನು ಖೈದಿಗಳಾಗಿ ಮಾಡಿದನು. ಅವರ ಆಸ್ತಿಗಳೆಲ್ಲವನ್ನೂ ಕೊಳ್ಳೆ ಹೊಡೆದನು. ಅವರ ಧಾರ್ಮಿಕ ಗ್ರಂಥಗಳನ್ನೆಲ್ಲಾ ಚಿಂದಿ ಮಾಡಿ ಬೈತುಲ್ ಮುಕದ್ದಸ್ ಮತ್ತು ಹೈಕಲ್ ಸುಲೈಮಾನ್ ಗಳನ್ನು ಬಲವಂತವಾಗಿ ವಶಪಡಿಸಿದನು. ಯಹೂದಿಗಳನ್ನು ಶಾಶ್ವತವಾಗಿ ಪ್ಯಾಲಸ್ತೀನ್‌ನಿಂದ ಗಡೀಪಾರು ಮಾಡಿದನು.