2 : 135
وَقَالُواْ كُونُواْ هُودًا أَوۡ نَصَٰرَىٰ تَهۡتَدُواْۗ قُلۡ بَلۡ مِلَّةَ إِبۡرَٰهِـۧمَ حَنِيفٗاۖ وَمَا كَانَ مِنَ ٱلۡمُشۡرِكِينَ
ಅವರು ಹೇಳಿದರು: “ನೀವು ಯಹೂದಿಗಳು ಅಥವಾ ಕ್ರೈಸ್ತರಾಗಿರಿ; ನೀವು ಸನ್ಮಾರ್ಗ ಪಡೆಯುವಿರಿ.” ಹೇಳಿರಿ: “ಅಲ್ಲ; (ವಾಸ್ತವವಾಗಿ ಸನ್ಮಾರ್ಗದಲ್ಲಿರುವವರು) ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸುವವರು. ಅವರು (ಇಬ್ರಾಹೀಮ್) ಏಕನಿಷ್ಠರಾಗಿದ್ದರು. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.”
Explanation & meanings · 1
- ಏಕನಿಷ್ಠ ಎಂದರೆ ಒಬ್ಬನೇ ದೇವನ ಆರಾಧಕ ಮತ್ತು ಇತರೆಲ್ಲಾ ದೇವರುಗಳನ್ನು ಬಿಟ್ಟು ಏಕೈಕ ದೇವನನ್ನು ಮಾತ್ರ ಆರಾಧಿಸುವವನು.