Skip to content
البَقَرَة /

ಆಯತ್ 137

2 : 137

ಆಯತ್ 137 of البَقَرَة (2 : 137). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 137

فَإِنۡ ءَامَنُواْ بِمِثۡلِ مَآ ءَامَنتُم بِهِۦ فَقَدِ ٱهۡتَدَواْۖ وَّإِن تَوَلَّوۡاْ فَإِنَّمَا هُمۡ فِي شِقَاقٖۖ فَسَيَكۡفِيكَهُمُ ٱللَّهُۚ وَهُوَ ٱلسَّمِيعُ ٱلۡعَلِيمُ

ನೀವು ವಿಶ್ವಾಸವಿಟ್ಟಂತೆಯೇ ಅವರೂ ವಿಶ್ವಾಸವಿಟ್ಟರೆ ಅವರು ಸನ್ಮಾರ್ಗ ಪಡೆಯುವರು. ಆದರೆ ಅವರು ವಿಮುಖರಾಗುವುದಾದರೆ ಅವರು ಸ್ಪಷ್ಟ ಭಿನ್ನಮತದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಅಲ್ಲಾಹು ಸಾಕಾಗುವನು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

Explanation & meanings · 1
  1. ಅಂದರೆ ನೀವು ವಿಶ್ವಾಸವಿಟ್ಟಂತೆ ವಿಶ್ವಾಸವಿಡದೆ ಅವರು ನಿಮ್ಮ ವಿರುದ್ಧ ಕುತಂತ್ರಗಳನ್ನು ಮುಂದುವರಿಸಿದರೆ ನೀವೇನೂ ಹೆದರಬೇಕಾಗಿಲ್ಲ. ಏಕೆಂದರೆ, ಅಲ್ಲಾಹು ನಿಮ್ಮ ಜೊತೆಗಿದ್ದಾನೆ. ಅವನು ನಿಮ್ಮನ್ನು ಅವರ ಕುತಂತ್ರಗಳಿಂದ ರಕ್ಷಿಸುತ್ತಾನೆ. ಈ ಭವಿಷ್ಯವು ಕೆಲವೇ ವರ್ಷಗಳಲ್ಲಿ ನೆರವೇರಿತು. ಯಹೂದಿಗಳ ಬನೂ ಕೈನುಕಾ ಮತ್ತು ಬನೂ ನದೀರ್ ಗೋತ್ರಗಳನ್ನು ಗಡೀಪಾರು ಮಾಡಲಾಯಿತು ಮತ್ತು ಬನೂ ಕುರೈಝ ಗೋತ್ರವನ್ನು ಸಂಹಾರ ಮಾಡಲಾಯಿತು.