Skip to content
البَقَرَة /

ಆಯತ್ 196

2 : 196

ಆಯತ್ 196 of البَقَرَة (2 : 196). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 196

وَأَتِمُّواْ ٱلۡحَجَّ وَٱلۡعُمۡرَةَ لِلَّهِۚ فَإِنۡ أُحۡصِرۡتُمۡ فَمَا ٱسۡتَيۡسَرَ مِنَ ٱلۡهَدۡيِۖ وَلَا تَحۡلِقُواْ رُءُوسَكُمۡ حَتَّىٰ يَبۡلُغَ ٱلۡهَدۡيُ مَحِلَّهُۥۚ فَمَن كَانَ مِنكُم مَّرِيضًا أَوۡ بِهِۦٓ أَذٗى مِّن رَّأۡسِهِۦ فَفِدۡيَةٞ مِّن صِيَامٍ أَوۡ صَدَقَةٍ أَوۡ نُسُكٖۚ فَإِذَآ أَمِنتُمۡ فَمَن تَمَتَّعَ بِٱلۡعُمۡرَةِ إِلَى ٱلۡحَجِّ فَمَا ٱسۡتَيۡسَرَ مِنَ ٱلۡهَدۡيِۚ فَمَن لَّمۡ يَجِدۡ فَصِيَامُ ثَلَٰثَةِ أَيَّامٖ فِي ٱلۡحَجِّ وَسَبۡعَةٍ إِذَا رَجَعۡتُمۡۗ تِلۡكَ عَشَرَةٞ كَامِلَةٞۗ ذَٰلِكَ لِمَن لَّمۡ يَكُنۡ أَهۡلُهُۥ حَاضِرِي ٱلۡمَسۡجِدِ ٱلۡحَرَامِۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ شَدِيدُ ٱلۡعِقَابِ

ಅಲ್ಲಾಹನಿಗಾಗಿ ಹಜ್ಜ್ ಮತ್ತು ಉಮ್ರಗಳನ್ನು ಪೂರ್ತಿಗೊಳಿಸಿರಿ. ನಿಮ್ಮನ್ನು (ದಾರಿ ಮಧ್ಯೆ) ತಡೆಯಲಾದರೆ ನಿಮಗೆ ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಿರಿ. ಬಲಿಮೃಗವು ಅದರ ಸ್ಥಳವನ್ನು ತಲುಪುವ ತನಕ ಕೇಶಮುಂಡನ ಮಾಡಬೇಡಿ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದು ಅಥವಾ ತಲೆಯಲ್ಲಿ ಏನಾದರೂ ತೊಂದರೆಯಿದ್ದು, (ಕೇಶ ಮುಂಡನ ಮಾಡಿದ್ದರೆ) ಅದಕ್ಕೆ ಪರಿಹಾರವಾಗಿ ಉಪವಾಸ ಅಥವಾ ದಾನಧರ್ಮ ಅಥವಾ ಬಲಿಕರ್ಮ ನಿರ್ವಹಿಸಲಿ. ಆದರೆ ನೀವು ನಿರ್ಭಯ ಸ್ಥಿತಿಯಲ್ಲಿದ್ದು, ನಿಮ್ಮಲ್ಲಿ ಯಾರಾದರೂ ಉಮ್ರಾ ನಿರ್ವಹಿಸಿ ಹಜ್ಜ್ ತನಕ ವಿಶ್ರಾಂತಿ ಪಡೆದರೆ, ಅವನು ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಲಿ. ಯಾರಿಗೆ ಬಲಿಮೃಗ ಸಿಗುವುದಿಲ್ಲವೋ ಅವನು ಹಜ್ಜ್‌ನ ಸಮಯದಲ್ಲಿ ಮೂರು ದಿನ ಮತ್ತು (ಊರಿಗೆ) ಮರಳಿದ ಬಳಿಕ ಏಳು ದಿನ; ಒಟ್ಟು ಹತ್ತು ದಿನ ಉಪವಾಸ ಆಚರಿಸಲಿ. ಈ ನಿಯಮವಿರುವುದು ಮಸ್ಜಿದುಲ್ ಹರಾಮ್‍ನ ನಿವಾಸಿಗಳಲ್ಲದವರಿಗೆ ಮಾತ್ರ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅತಿ ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.

Explanation & meanings · 1
  1. ದಾರಿ ಮಧ್ಯೆ ಶತ್ರುಗಳು ನಿಮ್ಮನ್ನು ತಡೆದರೆ, ಅಥವಾ ತೀವ್ರ ಅನಾರೋಗ್ಯದಿಂದಾಗಿ ಪ್ರಯಾಣ ಮುಂದುವರಿಸಲು ನಿಮಗೆ ಸಾಧ್ಯವಾಗದೆ ಹೋದರೆ, ಬಲಿಮೃಗವನ್ನು ಬಲಿ ನೀಡಿ, ಕೇಶ ಮುಂಡನ ಮಾಡಿ ಇಹ್ರಾಮ್‌ನಿಂದ ಮುಕ್ತರಾಗಬಹುದು.