Skip to content
البَقَرَة /

ಆಯತ್ 219

2 : 219

ಆಯತ್ 219 of البَقَرَة (2 : 219). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 219

۞ يَسۡـَٔلُونَكَ عَنِ ٱلۡخَمۡرِ وَٱلۡمَيۡسِرِۖ قُلۡ فِيهِمَآ إِثۡمٞ كَبِيرٞ وَمَنَٰفِعُ لِلنَّاسِ وَإِثۡمُهُمَآ أَكۡبَرُ مِن نَّفۡعِهِمَاۗ وَيَسۡـَٔلُونَكَ مَاذَا يُنفِقُونَۖ قُلِ ٱلۡعَفۡوَۗ كَذَٰلِكَ يُبَيِّنُ ٱللَّهُ لَكُمُ ٱلۡأٓيَٰتِ لَعَلَّكُمۡ تَتَفَكَّرُونَ

ಅವರು ನಿಮ್ಮೊಂದಿಗೆ ಮದ್ಯ ಮತ್ತು ಜೂಜಿನ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: “ಅವೆರಡರಲ್ಲೂ ಬಹುದೊಡ್ಡ ಪಾಪವಿದೆ ಮತ್ತು ಜನರಿಗೆ ಕೆಲವು ಪ್ರಯೋಜನಗಳೂ ಇವೆ. ಆದರೆ ಅವುಗಳ ಪಾಪವು ಪ್ರಯೋಜನಕ್ಕಿಂತಲೂ ದೊಡ್ಡದು.” ಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ಅಗತ್ಯಕ್ಕಿಂತ ಮಿಕ್ಕಿದ್ದು.” ಈ ರೀತಿ ಅಲ್ಲಾಹು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.

Explanation & meanings · 1
  1. ಮದ್ಯ ಮತ್ತು ಜೂಜಿನಲ್ಲಿ ಕೆಲವು ಲೌಕಿಕ ಪ್ರಯೋಜನಗಳಿವೆ. ಉದಾಹರಣೆಗೆ, ಮದ್ಯವು ತಾತ್ಕಾಲಿಕವಾಗಿ ದೇಹದಲ್ಲಿ ಉತ್ಸಾಹ ಮತ್ತು ಚುರುಕುತನವನ್ನು ಹೆಚ್ಚಿಸುತ್ತದೆ. ಕೆಲವೊಮ್ಮೆ ಮನಸ್ಸು ಮದ್ಯ ಸೇವನೆಯಿಂದ ಹರಿತವಾಗುತ್ತದೆ. ಇದರಿಂದ ಲೈಂಗಿಕ ಸಾಮರ್ಥ್ಯವು ಹೆಚ್ಚಾಗುತ್ತದೆ. ಅದೇ ರೀತಿ, ಮದ್ಯ ಮಾರಾಟವು ಲಾಭದಾಯಕ ಉದ್ಯಮವಾಗಿದೆ. ಜೂಜಿನಲ್ಲಿ ಕೆಲವೊಮ್ಮೆ ಅದೃಷ್ಟವಿರುವವನು ಕೋಟಿಗಳನ್ನು ಸಂಪಾದಿಸುತ್ತಾನೆ. ಆದರೆ ಈ ಪ್ರಯೋಜನಗಳು ವ್ಯಕ್ತಿಯ ಬುದ್ಧಿ ಮತ್ತು ಧರ್ಮಕ್ಕೆ ಉಂಟು ಮಾಡುವ ನಷ್ಟ ಮತ್ತು ಹಾನಿಗಳಿಗೆ ಹೋಲಿಸಿದರೆ ಅವುಗಳ ಪ್ರಯೋಜನವು ಉಲ್ಲೇಖಾರ್ಹವೇ ಅಲ್ಲ.