Skip to content
البَقَرَة /

ಆಯತ್ 226

2 : 226

ಆಯತ್ 226 of البَقَرَة (2 : 226). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 226

لِّلَّذِينَ يُؤۡلُونَ مِن نِّسَآئِهِمۡ تَرَبُّصُ أَرۡبَعَةِ أَشۡهُرٖۖ فَإِن فَآءُو فَإِنَّ ٱللَّهَ غَفُورٞ رَّحِيمٞ

ತಮ್ಮ ಪತ್ನಿಯರೊಡನೆ (ಲೈಂಗಿಕ ಸಂಪರ್ಕ ಮಾಡುವುದಿಲ್ಲವೆಂದು) ಪ್ರತಿಜ್ಞೆ ಮಾಡುವವರಿಗೆ ನಾಲ್ಕು ತಿಂಗಳ ಕಾಲಾವಕಾಶವಿದೆ. ಅವರೇನಾದರೂ (ದಾಂಪತ್ಯಕ್ಕೆ) ಮರಳಿದರೆ, ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

Explanation & meanings · 1
  1. ನಾನು ಹೆಂಡತಿಯೊಂದಿಗೆ ಒಂದು ತಿಂಗಳ ಕಾಲ ಅಥವಾ ಎರಡು ತಿಂಗಳ ಕಾಲ ಸಂಬಂಧವಿಟ್ಟುಕೊಳ್ಳುವುದಿಲ್ಲವೆಂದು ಗಂಡ ಪ್ರತಿಜ್ಞೆ ಮಾಡಿ, ಆ ನಿಗದಿತ ಅವಧಿಯ ನಂತರ ಹೆಂಡತಿಯೊಂದಿಗೆ ಸಂಬಂಧ ಮುಂದುವರಿಸಿದರೆ ಆತ ಪರಿಹಾರ ನೀಡಬೇಕಾಗಿಲ್ಲ. ಆದರೆ ಆ ಅವಧಿ ಪೂರ್ಣಗೊಳ್ಳುವುದಕ್ಕೆ ಮುಂಚೆ ಅವನು ಹೆಂಡತಿಯೊಂದಿಗೆ ಸಂಬಂಧ ಸ್ಥಾಪಿಸಿದರೆ ಪರಿಹಾರ ನೀಡಬೇಕಾಗುತ್ತದೆ. ಇನ್ನು ಗಂಡ ಅವಧಿಯನ್ನು ನಿಶ್ಚಯಿಸದೆ ನಾನು ನನ್ನ ಹೆಂಡತಿಯೊಂದಿಗೆ ಸಂಬಂಧವಿಟ್ಟುಕೊಳ್ಳುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರೆ, ಅವನಿಗೆ ನಾಲ್ಕು ತಿಂಗಳ ಕಾಲಾವಕಾಶವಿದೆ. ಅದರೊಳಗೆ ಒಂದೋ ಅವನು ಹೆಂಡತಿಯೊಂದಿಗೆ ಸಂಬಂಧವನ್ನು ಮುಂದುವರಿಸಬೇಕು ಅಥವಾ ಆಕೆಗೆ ವಿಚ್ಛೇದನೆ ನೀಡಬೇಕು. ನಾಲ್ಕು ತಿಂಗಳುಗಳಿಗಿಂತ ಹೆಚ್ಚು ಕಾಲ ಹೆಂಡತಿಯೊಂದಿಗೆ ಸಂಬಂಧ ಕಡಿಯುವುದಕ್ಕೆ ಅನುಮತಿಯಿಲ್ಲ. ಆತ ಸಂಬಂಧವನ್ನು ಮುಂದುವರಿಸುವುದಾದರೆ ಅದಕ್ಕೆ ಪರಿಹಾರ ನೀಡಬೇಕು. ಇನ್ನು ಅವನು ಸಂಬಂಧವನ್ನು ಮುಂದುವರಿಸದೆ ಮತ್ತು ವಿಚ್ಛೇದನೆಯನ್ನೂ ನೀಡದೆ, ಸಮಸ್ಯೆಯು ನ್ಯಾಯಾಲಯವನ್ನು ತಲುಪಿದರೆ, ಹೆಂಡತಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಅವನಿಗೆ ಎರಡರಲ್ಲಿ ಒಂದನ್ನು ಆರಿಸುವಂತೆ ಒತ್ತಡ ಹೇರಲಾಗುತ್ತದೆ.