Skip to content
البَقَرَة /

ಆಯತ್ 247

2 : 247

ಆಯತ್ 247 of البَقَرَة (2 : 247). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 247

وَقَالَ لَهُمۡ نَبِيُّهُمۡ إِنَّ ٱللَّهَ قَدۡ بَعَثَ لَكُمۡ طَالُوتَ مَلِكٗاۚ قَالُوٓاْ أَنَّىٰ يَكُونُ لَهُ ٱلۡمُلۡكُ عَلَيۡنَا وَنَحۡنُ أَحَقُّ بِٱلۡمُلۡكِ مِنۡهُ وَلَمۡ يُؤۡتَ سَعَةٗ مِّنَ ٱلۡمَالِۚ قَالَ إِنَّ ٱللَّهَ ٱصۡطَفَىٰهُ عَلَيۡكُمۡ وَزَادَهُۥ بَسۡطَةٗ فِي ٱلۡعِلۡمِ وَٱلۡجِسۡمِۖ وَٱللَّهُ يُؤۡتِي مُلۡكَهُۥ مَن يَشَآءُۚ وَٱللَّهُ وَٰسِعٌ عَلِيمٞ

ಅವರೊಡನೆ ಅವರ ಪ್ರವಾದಿ ಹೇಳಿದರು: "ಅಲ್ಲಾಹು ನಿಮಗೆ ತಾಲೂತ‌ರನ್ನು (ಸೌಲ್) ರಾಜನಾಗಿ ನೇಮಿಸಿದ್ದಾನೆ." ಅವರು ಹೇಳಿದರು: "ಅವರು ನಮಗೆ ರಾಜನಾಗಲು ಹೇಗೆ ಸಾಧ್ಯ? ರಾಜ ಪದವಿಗೆ ಅವರಿಗಿಂತಲೂ ಹೆಚ್ಚು ಅರ್ಹತೆ ನಮಗಿದೆ. ಅವರಿಗೆ ಹೇರಳ ಆಸ್ತಿಪಾಸ್ತಿಯನ್ನೂ ನೀಡಲಾಗಿಲ್ಲ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹು ನಿಮಗಿಂತ ಅವರನ್ನೇ ಆಯ್ಕೆ ಮಾಡಿದ್ದಾನೆ ಮತ್ತು ಅವರಿಗೆ ಬೌದ್ಧಿಕ ಹಾಗೂ ದೈಹಿಕ ಶ್ರೇಷ್ಠತೆಯನ್ನು ನೀಡಿದ್ದಾನೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ರಾಜ ಪದವಿ ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.”