Skip to content
البَقَرَة /

ಆಯತ್ 25

2 : 25

ಆಯತ್ 25 of البَقَرَة (2 : 25). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 25

وَبَشِّرِ ٱلَّذِينَ ءَامَنُواْ وَعَمِلُواْ ٱلصَّٰلِحَٰتِ أَنَّ لَهُمۡ جَنَّٰتٖ تَجۡرِي مِن تَحۡتِهَا ٱلۡأَنۡهَٰرُۖ كُلَّمَا رُزِقُواْ مِنۡهَا مِن ثَمَرَةٖ رِّزۡقٗا قَالُواْ هَٰذَا ٱلَّذِي رُزِقۡنَا مِن قَبۡلُۖ وَأُتُواْ بِهِۦ مُتَشَٰبِهٗاۖ وَلَهُمۡ فِيهَآ أَزۡوَٰجٞ مُّطَهَّرَةٞۖ وَهُمۡ فِيهَا خَٰلِدُونَ

ಸತ್ಯವಿಶ್ವಾಸಿಗಳು ಹಾಗೂ ಸತ್ಕರ್ಮವೆಸಗಿದವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆಯೆಂಬ ಸುವಾರ್ತೆಯನ್ನು ತಿಳಿಸಿರಿ. ಅವರಿಗೆ ಅದರ ಒಂದೊಂದು ಹಣ್ಣನ್ನು ಆಹಾರವಾಗಿ ನೀಡಲಾಗುವಾಗಲೆಲ್ಲಾ ಅವರು ಹೇಳುವರು: “ಇದು ನಮಗೆ ಮುಂಚೆ ನೀಡಲಾದದ್ದೇ ಅಲ್ಲವೇ!” ವಾಸ್ತವವಾಗಿ, ಅವರಿಗೆ ಅದನ್ನು ಹೋಲಿಕೆಯಿರುವ ರೂಪದಲ್ಲಿ ನೀಡಲಾಗಿದೆ. ಅವರಿಗೆ ಅಲ್ಲಿ ಪರಿಶುದ್ಧ ಸಂಗಾತಿಗಳಿದ್ದಾರೆ; ಅವರು ಅಲ್ಲಿ ಶಾಶ್ವತವಾಗಿ ವಾಸಿಸುವರು.

Explanation & meanings · 1
  1. ಹೋಲಿಕೆಯಿರುವ ರೂಪದಲ್ಲಿ ಎಂದರೆ ಒಂದೋ ಸ್ವರ್ಗದಲ್ಲಿರುವ ಹಣ್ಣುಗಳು ಪರಸ್ಪರ ಒಂದನ್ನೊಂದು ಹೋಲುತ್ತವೆ; ಅಥವಾ ಅವು ಇಹಲೋಕದ ಹಣ್ಣುಗಳ ಹೋಲಿಕೆಯನ್ನು ಹೊಂದಿರುತ್ತವೆ. ಹೋಲಿಕೆಯಿರುವುದು ರೂಪ, ಆಕಾರ, ಹೆಸರು ಅಥವಾ ಬಣ್ಣಗಳಲ್ಲಿ ಮಾತ್ರವೇ ಹೊರತು ಅವುಗಳ ರುಚಿ ಮತ್ತು ಗುಣಮಟ್ಟದಲ್ಲಲ್ಲ.