2 : 30
وَإِذۡ قَالَ رَبُّكَ لِلۡمَلَٰٓئِكَةِ إِنِّي جَاعِلٞ فِي ٱلۡأَرۡضِ خَلِيفَةٗۖ قَالُوٓاْ أَتَجۡعَلُ فِيهَا مَن يُفۡسِدُ فِيهَا وَيَسۡفِكُ ٱلدِّمَآءَ وَنَحۡنُ نُسَبِّحُ بِحَمۡدِكَ وَنُقَدِّسُ لَكَۖ قَالَ إِنِّيٓ أَعۡلَمُ مَا لَا تَعۡلَمُونَ
ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರೊಡನೆ, “ನಾನು ಭೂಮಿಯಲ್ಲಿ ಒಬ್ಬ ಉತ್ತರಾಧಿಕಾರಿಯನ್ನು (ಮನುಷ್ಯನನ್ನು) ಮಾಡುತ್ತೇನೆ” ಎಂದು ಹೇಳಿದ ಸಂದರ್ಭ. ಅವರು ಕೇಳಿದರು: “ಅಲ್ಲಿ ಕಿಡಿಗೇಡಿತನ ಮಾಡುವವನನ್ನು ಮತ್ತು ರಕ್ತ ಹರಿಸುವವನನ್ನು ಮಾಡುವೆಯಾ? ನಾವಂತೂ ನಿನ್ನನ್ನು ಸ್ತುತಿಸುತ್ತಾ ನಿನ್ನ ಪರಿಶುದ್ಧಿಯನ್ನು ಕೊಂಡಾಡುತ್ತೇವೆ ಮತ್ತು ನಿನ್ನ ಪವಿತ್ರತೆಯನ್ನು ಹೊಗಳುತ್ತೇವೆ.” ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ, ನಿಮಗೆ ತಿಳಿಯದೇ ಇರುವುದು ನನಗೆ ತಿಳಿದಿದೆ.”
Explanation & meanings · 1
- ಉತ್ತರಾಧಿಕಾರಿ ಎಂದರೆ ಅಲ್ಲಾಹನ ಉತ್ತರಾಧಿಕಾರಿಯಲ್ಲ. ಬದಲಿಗೆ, ಭೂಮಿಯಲ್ಲಿ ತಲೆಮಾರಿನ ನಂತರ ತಲೆಮಾರುಗಳಾಗಿ ಬರುವ ಮನುಷ್ಯರು.