2 : 60
۞ وَإِذِ ٱسۡتَسۡقَىٰ مُوسَىٰ لِقَوۡمِهِۦ فَقُلۡنَا ٱضۡرِب بِّعَصَاكَ ٱلۡحَجَرَۖ فَٱنفَجَرَتۡ مِنۡهُ ٱثۡنَتَا عَشۡرَةَ عَيۡنٗاۖ قَدۡ عَلِمَ كُلُّ أُنَاسٖ مَّشۡرَبَهُمۡۖ كُلُواْ وَٱشۡرَبُواْ مِن رِّزۡقِ ٱللَّهِ وَلَا تَعۡثَوۡاْ فِي ٱلۡأَرۡضِ مُفۡسِدِينَ
ಮೂಸಾ ತಮ್ಮ ಜನರಿಗಾಗಿ ನೀರನ್ನು ಬೇಡಿದ ಸಂದರ್ಭ. ನಾವು ಹೇಳಿದೆವು: “ನಿಮ್ಮ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ.” ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿ ಹರಿದವು. ಎಲ್ಲಾ ಜನರೂ (ಗೋತ್ರಗಳೂ) ತಮ್ಮ ನೀರಿನ ಸ್ಥಳವನ್ನು ತಿಳಿದುಕೊಂಡರು. (ನಾವು ಹೇಳಿದೆವು): “ಅಲ್ಲಾಹು ಒದಗಿಸಿದ ಆಹಾರದಿಂದ ತಿನ್ನಿರಿ ಮತ್ತು ಕುಡಿಯಿರಿ; ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲೆಯಬೇಡಿ."
Explanation & meanings · 1
- ಇಸ್ರಾಯೇಲ್ ಮಕ್ಕಳ ಹನ್ನೆರಡು ಗೋತ್ರಗಳಿಗೆ ಹನ್ನೆರಡು ಚಿಲುಮೆಗಳು.