Skip to content
البَقَرَة /

ಆಯತ್ 89

2 : 89

ಆಯತ್ 89 of البَقَرَة (2 : 89). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 89

وَلَمَّا جَآءَهُمۡ كِتَٰبٞ مِّنۡ عِندِ ٱللَّهِ مُصَدِّقٞ لِّمَا مَعَهُمۡ وَكَانُواْ مِن قَبۡلُ يَسۡتَفۡتِحُونَ عَلَى ٱلَّذِينَ كَفَرُواْ فَلَمَّا جَآءَهُم مَّا عَرَفُواْ كَفَرُواْ بِهِۦۚ فَلَعۡنَةُ ٱللَّهِ عَلَى ٱلۡكَٰفِرِينَ

ಅವರಲ್ಲಿರುವ (ಗ್ರಂಥವನ್ನು) ದೃಢೀಕರಿಸುವ ಒಂದು ಗ್ರಂಥವು (ಕುರ್‌ಆನ್) ಅಲ್ಲಾಹನ ಬಳಿಯಿಂದ ಅವರಿಗೆ ಬಂದಾಗ—ವಾಸ್ತವವಾಗಿ, ಇದಕ್ಕೆ ಮೊದಲು ಅವರು (ಅಂತಹ ಒಂದು ಗ್ರಂಥದ ಮೂಲಕ) ಸತ್ಯನಿಷೇಧಿಗಳ ವಿರುದ್ಧ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದರೂ ಸಹ—ಅವರಿಗೆ ಪರಿಚಿತವಾದ ಆ ಸಂದೇಶವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಶಾಪವಿರಲಿ.

Explanation & meanings · 1
  1. ಬಹುದೇವವಿಶ್ವಾಸಿಗಳೊಡನೆ ಯುದ್ಧ ನಡೆಯುವಾಗಲೆಲ್ಲಾ ಅವರು ಹೀಗೆ ಪ್ರಾರ್ಥಿಸುತ್ತಿದ್ದರು: "ಓ ಅಲ್ಲಾಹ್! ಅಂತಿಮ ಪ್ರವಾದಿಯನ್ನು ಬೇಗನೇ ಕಳುಹಿಸು. ನಾವು ಆ ಪ್ರವಾದಿಯೊಂದಿಗೆ ಸೇರಿ ಈ ಬಹುದೇವವಿಶ್ವಾಸಿಗಳ ವಿರುದ್ಧ ಗೆಲುವು ಪಡೆಯುತ್ತೇವೆ." ಆದರೆ ಅಂತಿಮ ಪ್ರವಾದಿ ಬಂದಾಗ ಅವರು ಆ ಪ್ರವಾದಿಯ ಸಂದೇಶವನ್ನು (ಕುರ್‌ಆನನ್ನು) ತಿರಸ್ಕರಿಸಿ ಅವರ ವಿರುದ್ಧವೇ ದ್ವೇಷ ಕಟ್ಟಿಕೊಂಡರು.