Skip to content
البَقَرَة /

ಆಯತ್ 90

2 : 90

ಆಯತ್ 90 of البَقَرَة (2 : 90). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 90

بِئۡسَمَا ٱشۡتَرَوۡاْ بِهِۦٓ أَنفُسَهُمۡ أَن يَكۡفُرُواْ بِمَآ أَنزَلَ ٱللَّهُ بَغۡيًا أَن يُنَزِّلَ ٱللَّهُ مِن فَضۡلِهِۦ عَلَىٰ مَن يَشَآءُ مِنۡ عِبَادِهِۦۖ فَبَآءُو بِغَضَبٍ عَلَىٰ غَضَبٖۚ وَلِلۡكَٰفِرِينَ عَذَابٞ مُّهِينٞ

ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅವನ ಔದಾರ್ಯವನ್ನು ಇಳಿಸಿಕೊಡುತ್ತಾನೆ ಎಂಬ ಅಸೂಯೆಯಿಂದ, ಅಲ್ಲಾಹು ಅವತೀರ್ಣಗೊಳಿಸಿದ ಸಂದೇಶವನ್ನು ನಿಷೇಧಿಸುವ ರೀತಿಯಲ್ಲಿ ಅವರು ತಮ್ಮನ್ನು ತಾವೇ ಮಾರಿಕೊಂಡದ್ದು ಬಹಳ ನಿಕೃಷ್ಟವಾಗಿದೆ. ಇದರಿಂದ ಅವರು ಕೋಪದ ಮೇಲೆ ಕೋಪಕ್ಕೆ ಪಾತ್ರರಾದರು. ಆ ಸತ್ಯನಿಷೇಧಿಗಳಿಗೆ ಅಪಮಾನಕರ ಶಿಕ್ಷೆಯಿದೆ.

Explanation & meanings · 1
  1. ಯಹೂದಿಗಳು ಅಂತಿಮ ಪ್ರವಾದಿಯ ಆಗಮನವನ್ನು ನಿರೀಕ್ಷಿಸುತ್ತಿದ್ದರು. ಅಂತಿಮ ಪ್ರವಾದಿಯ ಎಲ್ಲಾ ಗುಣಲಕ್ಷಣಗಳನ್ನು ಅವರ ಗ್ರಂಥಗಳಲ್ಲಿ ವಿವರಿಸಲಾಗಿತ್ತು. ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಲ್ಲಿ ಈ ಎಲ್ಲಾ ಗುಣಲಕ್ಷಣಗಳಿದ್ದವು ಮತ್ತು ಅವರು ಅಂತಿಮ ಪ್ರವಾದಿಯೆಂದು ಯಹೂದಿಗಳಿಗೆ ಸಂಪೂರ್ಣ ಖಾತ್ರಿಯಿತ್ತು. ಆದರೆ ಅವರ ನಿರೀಕ್ಷೆಯಂತೆ ಆ ಪ್ರವಾದಿ ಯಹೂದಿ ವಂಶದಲ್ಲಿ ಹುಟ್ಟಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಅವರು ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರನ್ನು ಮತ್ತು ಅವರು ತಂದ ಸಂದೇಶವನ್ನು ತಿರಸ್ಕರಿಸಿದರು.