Skip to content
ಸೂರಗಳ ಪಟ್ಟಿ /

الفُرقَان

الفُرقَان is chapter 25 of the Quran and has 77 verses. This page presents it in full in the Uthmani script, with a verse-by-verse translation of its meaning.

77 ಆಯತ್‌ಗಳು ಸೂರ ಸಂಖ್ಯೆ 25
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

تَبَارَكَ ٱلَّذِي نَزَّلَ ٱلۡفُرۡقَانَ عَلَىٰ عَبۡدِهِۦ لِيَكُونَ لِلۡعَٰلَمِينَ نَذِيرًا

ಸತ್ಯಾಸತ್ಯ ವಿವೇಚಕ ಗ್ರಂಥವನ್ನು (ಕುರ್‌ಆನನ್ನು) ತನ್ನ ದಾಸನಿಗೆ (ಪ್ರವಾದಿಗೆ)—ಅವರು ಸರ್ವಲೋಕದವರಿಗೆ ಒಬ್ಬ ಮುನ್ನೆಚ್ಚರಿಕೆಗಾರನಾಗಲೆಂದು—ಅವತೀರ್ಣಗೊಳಿಸಿದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.

ٱلَّذِي لَهُۥ مُلۡكُ ٱلسَّمَٰوَٰتِ وَٱلۡأَرۡضِ وَلَمۡ يَتَّخِذۡ وَلَدٗا وَلَمۡ يَكُن لَّهُۥ شَرِيكٞ فِي ٱلۡمُلۡكِ وَخَلَقَ كُلَّ شَيۡءٖ فَقَدَّرَهُۥ تَقۡدِيرٗا

ಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ.

وَٱتَّخَذُواْ مِن دُونِهِۦٓ ءَالِهَةٗ لَّا يَخۡلُقُونَ شَيۡـٔٗا وَهُمۡ يُخۡلَقُونَ وَلَا يَمۡلِكُونَ لِأَنفُسِهِمۡ ضَرّٗا وَلَا نَفۡعٗا وَلَا يَمۡلِكُونَ مَوۡتٗا وَلَا حَيَوٰةٗ وَلَا نُشُورٗا

ಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ.

وَقَالَ ٱلَّذِينَ كَفَرُوٓاْ إِنۡ هَٰذَآ إِلَّآ إِفۡكٌ ٱفۡتَرَىٰهُ وَأَعَانَهُۥ عَلَيۡهِ قَوۡمٌ ءَاخَرُونَۖ فَقَدۡ جَآءُو ظُلۡمٗا وَزُورٗا

ಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.

وَقَالُوٓاْ أَسَٰطِيرُ ٱلۡأَوَّلِينَ ٱكۡتَتَبَهَا فَهِيَ تُمۡلَىٰ عَلَيۡهِ بُكۡرَةٗ وَأَصِيلٗا

ಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.”