Skip to content
آل عِمران /

ಆಯತ್ 7

3 : 7

ಆಯತ್ 7 of آل عِمران (3 : 7). This page carries the verse in the Uthmani script with a translation of its meaning, at a stable URL that can be cited on its own.

آل عِمران ಆಯತ್‌ಗಳು 200
ಸೂರ · آل عِمران
ಕನ್ನಡ · Hamza
3 : 7

هُوَ ٱلَّذِيٓ أَنزَلَ عَلَيۡكَ ٱلۡكِتَٰبَ مِنۡهُ ءَايَٰتٞ مُّحۡكَمَٰتٌ هُنَّ أُمُّ ٱلۡكِتَٰبِ وَأُخَرُ مُتَشَٰبِهَٰتٞۖ فَأَمَّا ٱلَّذِينَ فِي قُلُوبِهِمۡ زَيۡغٞ فَيَتَّبِعُونَ مَا تَشَٰبَهَ مِنۡهُ ٱبۡتِغَآءَ ٱلۡفِتۡنَةِ وَٱبۡتِغَآءَ تَأۡوِيلِهِۦۖ وَمَا يَعۡلَمُ تَأۡوِيلَهُۥٓ إِلَّا ٱللَّهُۗ وَٱلرَّٰسِخُونَ فِي ٱلۡعِلۡمِ يَقُولُونَ ءَامَنَّا بِهِۦ كُلّٞ مِّنۡ عِندِ رَبِّنَاۗ وَمَا يَذَّكَّرُ إِلَّآ أُوْلُواْ ٱلۡأَلۡبَٰبِ

ನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಬೀಳುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: “ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದಾಗಿದೆ.” ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಪಡೆಯುವುದಿಲ್ಲ.

Explanation & meanings · 1
  1. ಸ್ಪಷ್ಟವಚನಗಳು ಅಂದರೆ ಆದೇಶ-ವಿರೋಧಗಳು, ನಿಯಮಗಳು, ಸಮಸ್ಯೆಗಳಿಗೆ ಪರಿಹಾರಗಳು, ಸಮಾಚಾರಗಳು ಮತ್ತು ನಿರೂಪಣೆಗಳಿರುವ ವಚನಗಳು. ಇವುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಿಲ್ಲ. ಹೋಲಿಕೆಯಿರುವ ವಚನಗಳು ಇವುಗಳಿಗೆ ತದ್ವಿರುದ್ಧವಾದದ್ದು. ಅವು ಅಲ್ಲಾಹನ ಅಸ್ತಿತ್ವ, ವಿಧಿ-ನಿರ್ಣಯ, ಸ್ವರ್ಗ-ನರಕ, ದೇವದೂತರು ಮುಂತಾದವುಗಳಿಗೆ ಸಂಬಂಧಿಸಿದ ವಿವರಣೆಗಳಿರುವ ವಚನಗಳು.