Skip to content
ಸೂರಗಳ ಪಟ್ಟಿ /

السَّجدة

السَّجدة is chapter 32 of the Quran and has 30 verses. This page presents it in full in the Uthmani script, with a verse-by-verse translation of its meaning.

30 ಆಯತ್‌ಗಳು ಸೂರ ಸಂಖ್ಯೆ 32
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

الٓمٓ

ಅಲಿಫ್-ಲಾಮ್-ಮೀಮ್.

تَنزِيلُ ٱلۡكِتَٰبِ لَا رَيۡبَ فِيهِ مِن رَّبِّ ٱلۡعَٰلَمِينَ

ಈ ಗ್ರಂಥವು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಅವತೀರ್ಣವಾಗಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ.

أَمۡ يَقُولُونَ ٱفۡتَرَىٰهُۚ بَلۡ هُوَ ٱلۡحَقُّ مِن رَّبِّكَ لِتُنذِرَ قَوۡمٗا مَّآ أَتَىٰهُم مِّن نَّذِيرٖ مِّن قَبۡلِكَ لَعَلَّهُمۡ يَهۡتَدُونَ

ಅವರು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಅವತೀರ್ಣವಾದ ಸತ್ಯವಾಗಿದೆ. ನಿಮಗಿಂತ ಮೊದಲು ಯಾವುದೇ ಮುನ್ನೆಚ್ಚರಿಕೆಗಾರರು ಬರದ ಈ ಜನರಿಗೆ ಎಚ್ಚರಿಕೆ ನೀಡಲೆಂದು. ಅವರು ಸನ್ಮಾರ್ಗವನ್ನು ಸ್ವೀಕರಿಸುವುದಕ್ಕಾಗಿ.

ٱللَّهُ ٱلَّذِي خَلَقَ ٱلسَّمَٰوَٰتِ وَٱلۡأَرۡضَ وَمَا بَيۡنَهُمَا فِي سِتَّةِ أَيَّامٖ ثُمَّ ٱسۡتَوَىٰ عَلَى ٱلۡعَرۡشِۖ مَا لَكُم مِّن دُونِهِۦ مِن وَلِيّٖ وَلَا شَفِيعٍۚ أَفَلَا تَتَذَكَّرُونَ

ಅಲ್ಲಾಹನೇ ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನ ಹೊರತು ನಿಮಗೆ ಬೇರೆ ರಕ್ಷಕರೋ, ಶಿಫಾರಸುಗಾರರೋ ಇಲ್ಲ. ಆದರೂ ನೀವು ಉಪದೇಶ ಪಡೆಯುವುದಿಲ್ಲವೇ?

يُدَبِّرُ ٱلۡأَمۡرَ مِنَ ٱلسَّمَآءِ إِلَى ٱلۡأَرۡضِ ثُمَّ يَعۡرُجُ إِلَيۡهِ فِي يَوۡمٖ كَانَ مِقۡدَارُهُۥٓ أَلۡفَ سَنَةٖ مِّمَّا تَعُدُّونَ

ಅವನು ಆಕಾಶದಿಂದ ಭೂಮಿಯ ತನಕ ಎಲ್ಲಾ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ನಂತರ ನಿಮ್ಮ ಎಣಿಕೆಯ ಪ್ರಕಾರ ಒಂದು ಸಾವಿರ ವರ್ಷಗಳಷ್ಟು ದೀರ್ಘವಾದ ಒಂದು ದಿನದಂದು ಆ ಕಾರ್ಯಗಳು ಅವನ ಬಳಿಗೆ ಏರಿಹೋಗುತ್ತವೆ.