Skip to content
ಸೂರಗಳ ಪಟ್ಟಿ /

صٓ

صٓ is chapter 38 of the Quran and has 88 verses. This page presents it in full in the Uthmani script, with a verse-by-verse translation of its meaning.

88 ಆಯತ್‌ಗಳು ಸೂರ ಸಂಖ್ಯೆ 38
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

صٓۚ وَٱلۡقُرۡءَانِ ذِي ٱلذِّكۡرِ

ಸ್ವಾದ್. ಉಪದೇಶವನ್ನು ಒಳಗೊಂಡಿರುವ ಕುರ್‌ಆನ್‍ನ ಮೇಲಾಣೆ!

بَلِ ٱلَّذِينَ كَفَرُواْ فِي عِزَّةٖ وَشِقَاقٖ

ಆದರೆ ಸತ್ಯನಿಷೇಧಿಗಳು ದುರಭಿಮಾನ ಮತ್ತು ವಿರೋಧದಲ್ಲಿದ್ದಾರೆ.

كَمۡ أَهۡلَكۡنَا مِن قَبۡلِهِم مِّن قَرۡنٖ فَنَادَواْ وَّلَاتَ حِينَ مَنَاصٖ

ನಾವು ಅವರಿಗಿಂತ ಮುಂಚೆ ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಆಗ ಅವರು ಎಲ್ಲಾ ರೀತಿಯಲ್ಲೂ ಚೀತ್ಕರಿಸಿದರು. ಆದರೆ ಅದು ಪಾರಾಗುವ ಸಮಯವಾಗಿರಲಿಲ್ಲ.

وَعَجِبُوٓاْ أَن جَآءَهُم مُّنذِرٞ مِّنۡهُمۡۖ وَقَالَ ٱلۡكَٰفِرُونَ هَٰذَا سَٰحِرٞ كَذَّابٌ

ಅವರಿಂದಲೇ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಟ್ಟರು. ಸತ್ಯನಿಷೇಧಿಗಳು ಹೇಳಿದರು: “ಇವನೊಬ್ಬ ಮಾಟಗಾರ ಮತ್ತು ಸುಳ್ಳುಗಾರ!

أَجَعَلَ ٱلۡأٓلِهَةَ إِلَٰهٗا وَٰحِدًاۖ إِنَّ هَٰذَا لَشَيۡءٌ عُجَابٞ

ಇವನು ಇಷ್ಟೊಂದು ದೇವರುಗಳನ್ನು ಏಕೈಕ ದೇವರಾಗಿ ಮಾಡಿದನೇ? ನಿಜಕ್ಕೂ ಇದೊಂದು ಅಚ್ಚರಿದಾಯಕ ವಿಷಯವಾಗಿದೆ!”