Skip to content
صٓ /

ಆಯತ್ 24

38 : 24

ಆಯತ್ 24 of صٓ (38 : 24). This page carries the verse in the Uthmani script with a translation of its meaning, at a stable URL that can be cited on its own.

صٓ ಆಯತ್‌ಗಳು 88
ಸೂರ · صٓ
ಕನ್ನಡ · Hamza
38 : 24

قَالَ لَقَدۡ ظَلَمَكَ بِسُؤَالِ نَعۡجَتِكَ إِلَىٰ نِعَاجِهِۦۖ وَإِنَّ كَثِيرٗا مِّنَ ٱلۡخُلَطَآءِ لَيَبۡغِي بَعۡضُهُمۡ عَلَىٰ بَعۡضٍ إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ وَقَلِيلٞ مَّا هُمۡۗ وَظَنَّ دَاوُۥدُ أَنَّمَا فَتَنَّٰهُ فَٱسۡتَغۡفَرَ رَبَّهُۥ وَخَرَّۤ رَاكِعٗاۤ وَأَنَابَ۩

ಅವರು (ದಾವೂದ್) ಹೇಳಿದರು: “ಅವನ ಹೆಣ್ಣುಕುರಿಗಳ ಜೊತೆಗೆ ನಿನ್ನ ಹೆಣ್ಣುಕುರಿಯನ್ನು ಸೇರಿಸಬೇಕೆಂದು ಬೇಡುವ ಮೂಲಕ ಅವನು ನಿನ್ನೊಡನೆ ಖಂಡಿತ ಅಕ್ರಮವೆಸಗಿದ್ದಾನೆ. ನಿಶ್ಚಯವಾಗಿಯೂ ಪಾಲುದಾರರಲ್ಲಿ ಹೆಚ್ಚಿನವರೂ (ಹೀಗೆಯೇ) ಪರಸ್ಪರ ಅತಿರೇಕವೆಸಗುತ್ತಾರೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗುವವರು ಇದಕ್ಕೆ ಹೊರತಾಗಿದ್ದಾರೆ. ಆದರೆ ಅವರು ಬಹಳ ಕಡಿಮೆ ಜನರು ಮಾತ್ರ.” ನಾವು ಅವರನ್ನು ಪರೀಕ್ಷಿಸಿದ್ದೆಂದು ದಾವೂದರಿಗೆ ಖಾತ್ರಿಯಾಯಿತು. ಆದ್ದರಿಂದ ಅವರು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿದರು ಮತ್ತು ಸಾಷ್ಟಾಂಗವೆರಗಿ ಪಶ್ಚಾತ್ತಾಪಪಟ್ಟರು.