Skip to content
النِّسَاء /

ಆಯತ್ 171

4 : 171

ಆಯತ್ 171 of النِّسَاء (4 : 171). This page carries the verse in the Uthmani script with a translation of its meaning, at a stable URL that can be cited on its own.

النِّسَاء ಆಯತ್‌ಗಳು 176
ಸೂರ · النِّسَاء
ಕನ್ನಡ · Hamza
4 : 171

يَٰٓأَهۡلَ ٱلۡكِتَٰبِ لَا تَغۡلُواْ فِي دِينِكُمۡ وَلَا تَقُولُواْ عَلَى ٱللَّهِ إِلَّا ٱلۡحَقَّۚ إِنَّمَا ٱلۡمَسِيحُ عِيسَى ٱبۡنُ مَرۡيَمَ رَسُولُ ٱللَّهِ وَكَلِمَتُهُۥٓ أَلۡقَىٰهَآ إِلَىٰ مَرۡيَمَ وَرُوحٞ مِّنۡهُۖ فَـَٔامِنُواْ بِٱللَّهِ وَرُسُلِهِۦۖ وَلَا تَقُولُواْ ثَلَٰثَةٌۚ ٱنتَهُواْ خَيۡرٗا لَّكُمۡۚ إِنَّمَا ٱللَّهُ إِلَٰهٞ وَٰحِدٞۖ سُبۡحَٰنَهُۥٓ أَن يَكُونَ لَهُۥ وَلَدٞۘ لَّهُۥ مَا فِي ٱلسَّمَٰوَٰتِ وَمَا فِي ٱلۡأَرۡضِۗ وَكَفَىٰ بِٱللَّهِ وَكِيلٗا

ಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಹದ್ದುಮೀರಿ ವರ್ತಿಸಬೇಡಿ. ಅಲ್ಲಾಹನ ಬಗ್ಗೆ ಸತ್ಯವನ್ನಲ್ಲದೆ ಬೇರೇನನ್ನೂ ಹೇಳಬೇಡಿ. ಮರ್ಯಮರ ಮಗ ಮಸೀಹ ಈಸಾ ಅಲ್ಲಾಹನ ಸಂದೇಶವಾಹಕರು, ಮರ್ಯಮರಿಗೆ ಅವನು ಹಾಕಿಕೊಟ್ಟ ಅವನ ವಚನ ಮತ್ತು ಅವನ ಕಡೆಯ ಒಂದು ಆತ್ಮವಾಗಿದ್ದಾರೆ. ಆದ್ದರಿಂದ ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಡಿರಿ. ಮೂರು ಎಂದು ಹೇಳಬೇಡಿ. ಹಾಗೆ ಹೇಳುವುದನ್ನು ನಿಲ್ಲಿಸಿದರೆ ನಿಮಗೇ ಒಳ್ಳೆಯದು. ಅಲ್ಲಾಹು ಏಕೈಕ ದೇವನಾಗಿದ್ದಾನೆ. ಮಕ್ಕಳು ಉಂಟಾಗುತ್ತಾರೆ ಎಂಬುದರಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.

Explanation & meanings · 1
  1. ಕ್ರೈಸ್ತರು ತಿಯೇಕತ್ವದಲ್ಲಿ ನಂಬಿಕೆಯಿಡುತ್ತಾರೆ. ತ್ರಿಯೇಕತ್ವ ಎಂದರೆ ತಂದೆ, ಮಗ ಮತ್ತು ಪವಿತ್ರಾತ್ಮ—ಇವರು ಮೂವರೂ ಒಂದೇ ಮತ್ತು ಇವರು ಮೂವರೂ ದೇವರುಗಳು ಎಂಬ ನಂಬಿಕೆ.