Skip to content
المَائدة /

ಆಯತ್ 18

5 : 18

ಆಯತ್ 18 of المَائدة (5 : 18). This page carries the verse in the Uthmani script with a translation of its meaning, at a stable URL that can be cited on its own.

المَائدة ಆಯತ್‌ಗಳು 120
ಸೂರ · المَائدة
ಕನ್ನಡ · Hamza
5 : 18

وَقَالَتِ ٱلۡيَهُودُ وَٱلنَّصَٰرَىٰ نَحۡنُ أَبۡنَٰٓؤُاْ ٱللَّهِ وَأَحِبَّٰٓؤُهُۥۚ قُلۡ فَلِمَ يُعَذِّبُكُم بِذُنُوبِكُمۖ بَلۡ أَنتُم بَشَرٞ مِّمَّنۡ خَلَقَۚ يَغۡفِرُ لِمَن يَشَآءُ وَيُعَذِّبُ مَن يَشَآءُۚ وَلِلَّهِ مُلۡكُ ٱلسَّمَٰوَٰتِ وَٱلۡأَرۡضِ وَمَا بَيۡنَهُمَاۖ وَإِلَيۡهِ ٱلۡمَصِيرُ

ಯಹೂದಿಗಳು ಮತ್ತು ಕ್ರೈಸ್ತರು ಹೇಳುತ್ತಾರೆ: “ನಾವು ಅಲ್ಲಾಹನ ಮಕ್ಕಳು ಮತ್ತು ಅವನ ಪ್ರೀತಿಪಾತ್ರರು.” ಹೇಳಿರಿ: “ಹಾಗಾದರೆ, ನೀವು ತಪ್ಪು ಮಾಡಿದರೆ ಅವನು ನಿಮ್ಮನ್ನು ಶಿಕ್ಷಿಸುವುದೇಕೆ?” ಅಲ್ಲ, ವಾಸ್ತವವಾಗಿ ನೀವೆಲ್ಲರೂ ಅವನ ಸೃಷ್ಟಿಗಳಲ್ಲಿ ಸೇರಿದ ಮನುಷ್ಯರು. ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಆಧಿಪತ್ಯವು ಅಲ್ಲಾಹನಿಗೆ ಸೇರಿದ್ದು. ನೀವೆಲ್ಲರೂ ಅವನ ಬಳಿಗೇ ಮರಳಿ ಹೋಗಬೇಕಾಗಿದೆ.

Explanation & meanings · 1
  1. ಯಹೂದಿಗಳು ಉಝೈರ್‌ರನ್ನು ಮತ್ತು ಕ್ರೈಸ್ತರು ಈಸಾರನ್ನು ಅಲ್ಲಾಹನ ಮಗನೆಂದು ಕರೆಯುತ್ತಿದ್ದರು. ಅಷ್ಟೇ ಅಲ್ಲದೆ, ಸ್ವತಃ ತಮ್ಮನ್ನು ದೇವರ ಮಕ್ಕಳು ಮತ್ತು ದೇವರ ಪ್ರೀತಿಪಾತ್ರರೆಂದು ಅಹಂಭಾವದಿಂದ ಹೇಳುತ್ತಿದ್ದರು.