Skip to content
المَائدة /

ಆಯತ್ 54

5 : 54

ಆಯತ್ 54 of المَائدة (5 : 54). This page carries the verse in the Uthmani script with a translation of its meaning, at a stable URL that can be cited on its own.

المَائدة ಆಯತ್‌ಗಳು 120
ಸೂರ · المَائدة
ಕನ್ನಡ · Hamza
5 : 54

يَٰٓأَيُّهَا ٱلَّذِينَ ءَامَنُواْ مَن يَرۡتَدَّ مِنكُمۡ عَن دِينِهِۦ فَسَوۡفَ يَأۡتِي ٱللَّهُ بِقَوۡمٖ يُحِبُّهُمۡ وَيُحِبُّونَهُۥٓ أَذِلَّةٍ عَلَى ٱلۡمُؤۡمِنِينَ أَعِزَّةٍ عَلَى ٱلۡكَٰفِرِينَ يُجَٰهِدُونَ فِي سَبِيلِ ٱللَّهِ وَلَا يَخَافُونَ لَوۡمَةَ لَآئِمٖۚ ذَٰلِكَ فَضۡلُ ٱللَّهِ يُؤۡتِيهِ مَن يَشَآءُۚ وَٱللَّهُ وَٰسِعٌ عَلِيمٌ

ಓ ಸತ್ಯವಿಶ್ವಾಸಿಗಳೇ! ನಿಮ್ಮಲ್ಲಿ ಯಾರಾದರೂ ಧರ್ಮಪರಿತ್ಯಾಗ ಮಾಡಿದರೆ, ಸದ್ಯವೇ ಅಲ್ಲಾಹು (ನಿಮ್ಮ ಬದಲಿಗೆ) ಬೇರೆ ಜನರನ್ನು ತರುವನು. ಅವನು ಅವರನ್ನು ಪ್ರೀತಿಸುವನು ಮತ್ತು ಅವರು ಅವನನ್ನು ಪ್ರೀತಿಸುವರು. ಅವರು ಸತ್ಯವಿಶ್ವಾಸಿಗಳ ಮುಂದೆ ದೈನ್ಯತೆ ಮತ್ತು ಸತ್ಯನಿಷೇಧಿಗಳ ಮುಂದೆ ಪೌರುಷವನ್ನು ಪ್ರಕಟಿಸುವರು. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವರು ಮತ್ತು ಆಕ್ಷೇಪಿಸುವವನ ಯಾವುದೇ ಆಕ್ಷೇಪಕ್ಕೂ ಭಯಪಡಲಾರರು. ಅದು ಅಲ್ಲಾಹನ ಔದಾರ್ಯವಾಗಿದೆ. ಅವನು ಇಚ್ಛಿಸುವವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.

Explanation & meanings · 1
  1. ಇಸ್ಲಾಂ ಧರ್ಮದ ಅಸ್ತಿತ್ವವು ನಿಮ್ಮನ್ನು ಅವಲಂಬಿಸಿಲ್ಲ. ನೀವು ಧರ್ಮಪರಿತ್ಯಾಗ ಮಾಡಿದರೆ ಅಲ್ಲಾಹು ನಿಮ್ಮ ಸ್ಥಾನದಲ್ಲಿ ಬೇರೆ ಜನರನ್ನು ತರುವನು. ಅವರಿಗೆ ನಾಲ್ಕು ವಿಶೇಷತೆಗಳಿರುವುದು. 1. ಅವರನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಅವರು ಅಲ್ಲಾಹನನ್ನು ಪ್ರೀತಿಸುತ್ತಾರೆ. 2. ಅವರು ಸತ್ಯವಿಶ್ವಾಸಿಗಳೊಂದಿಗೆ ಮೃದುವಾಗಿ ವರ್ತಿಸುತ್ತಾರೆ ಮತ್ತು ಸತ್ಯನಿಷೇಧಿಗಳೊಂದಿಗೆ ಕಠೋರವಾಗಿ ವರ್ತಿಸುತ್ತಾರೆ. 3. ಅವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. 4. ಅವರು ಅಲ್ಲಾಹನ ವಿಷಯದಲ್ಲಿ ಯಾರನ್ನೂ ಭಯಪಡುವುದಿಲ್ಲ.