Skip to content
المَائدة /

ಆಯತ್ 6

5 : 6
المَائدة ಆಯತ್‌ಗಳು 120
ಸೂರ · المَائدة
ಕನ್ನಡ · Hamza
5 : 6

يَٰٓأَيُّهَا ٱلَّذِينَ ءَامَنُوٓاْ إِذَا قُمۡتُمۡ إِلَى ٱلصَّلَوٰةِ فَٱغۡسِلُواْ وُجُوهَكُمۡ وَأَيۡدِيَكُمۡ إِلَى ٱلۡمَرَافِقِ وَٱمۡسَحُواْ بِرُءُوسِكُمۡ وَأَرۡجُلَكُمۡ إِلَى ٱلۡكَعۡبَيۡنِۚ وَإِن كُنتُمۡ جُنُبٗا فَٱطَّهَّرُواْۚ وَإِن كُنتُم مَّرۡضَىٰٓ أَوۡ عَلَىٰ سَفَرٍ أَوۡ جَآءَ أَحَدٞ مِّنكُم مِّنَ ٱلۡغَآئِطِ أَوۡ لَٰمَسۡتُمُ ٱلنِّسَآءَ فَلَمۡ تَجِدُواْ مَآءٗ فَتَيَمَّمُواْ صَعِيدٗا طَيِّبٗا فَٱمۡسَحُواْ بِوُجُوهِكُمۡ وَأَيۡدِيكُم مِّنۡهُۚ مَا يُرِيدُ ٱللَّهُ لِيَجۡعَلَ عَلَيۡكُم مِّنۡ حَرَجٖ وَلَٰكِن يُرِيدُ لِيُطَهِّرَكُمۡ وَلِيُتِمَّ نِعۡمَتَهُۥ عَلَيۡكُمۡ لَعَلَّكُمۡ تَشۡكُرُونَ

ಓ ಸತ್ಯವಿಶ್ವಾಸಿಗಳೇ! ನೀವು ನಮಾಝ್‍ಗಾಗಿ ಸಿದ್ಧರಾದರೆ ನಿಮ್ಮ ಮುಖಗಳನ್ನು ಮತ್ತು ಮೊಣಕೈಗಳವರೆಗೆ ಎರಡು ಕೈಗಳನ್ನು ತೊಳೆಯಿರಿ, ತಲೆಗಳನ್ನು ಸವರಿರಿ ಮತ್ತು ಎರಡು ಕಾಲುಗಳನ್ನು ಹರಡುಗಂಟಿನ ತನಕ ತೊಳೆಯಿರಿ. ನೀವು ದೊಡ್ಡ ಅಶುದ್ಧಿಯಲ್ಲಿದ್ದರೆ (ಸ್ನಾನ ಮಾಡಿ) ಶುದ್ಧರಾಗಿರಿ. ನೀವು ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ; ಅಥವಾ ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದಿದ್ದರೆ, ಅಥವಾ ಮಹಿಳೆಯರನ್ನು ಸ್ಪರ್ಶಿಸಿದ್ದರೆ (ಲೈಂಗಿಕ ಸಂಪರ್ಕ ಮಾಡಿದ್ದರೆ); ನಂತರ ನಿಮಗೆ ಶುದ್ಧಿಯಾಗಲು ನೀರು ದೊರೆಯದಿದ್ದರೆ, ಶುದ್ಧ ಮಣ್ಣಿನಿಂದ ತಯಮ್ಮುಮ್ ಮಾಡಿ, ಮುಖ ಮತ್ತು ಕೈಗಳನ್ನು ಸವರಿರಿ. ಅಲ್ಲಾಹು ನಿಮಗೆ ತೊಂದರೆ ಮಾಡಲು ಬಯಸುವುದಿಲ್ಲ. ಆದರೆ ಅವನು ನಿಮ್ಮನ್ನು ಶುದ್ಧೀಕರಿಸಲು ಮತ್ತು ತನ್ನ ಅನುಗ್ರಹವನ್ನು ನಿಮಗೆ ಪೂರ್ತಿ ಮಾಡಿಕೊಡಲು ಬಯಸುತ್ತಾನೆ. ನೀವು ಕೃತಜ್ಞರಾಗುವುದಕ್ಕಾಗಿ.