Skip to content
ಸೂರಗಳ ಪಟ್ಟಿ /

القَمَر

القَمَر is chapter 54 of the Quran and has 55 verses. This page presents it in full in the Uthmani script, with a verse-by-verse translation of its meaning.

55 ಆಯತ್‌ಗಳು ಸೂರ ಸಂಖ್ಯೆ 54
ಆಯತ್‌ಗೆ ಹೋಗಿ
ಕನ್ನಡ · Hamza
بِسْمِ ٱللَّهِ ٱلرَّحْمَٰنِ ٱلرَّحِيمِ

ٱقۡتَرَبَتِ ٱلسَّاعَةُ وَٱنشَقَّ ٱلۡقَمَرُ

ಅಂತ್ಯಸಮಯವು ಹತ್ತಿರವಾಗಿದೆ ಮತ್ತು ಚಂದ್ರ ಇಬ್ಭಾಗವಾಗಿದೆ.

Explanation & meanings · 1
  1. ಮಕ್ಕಾದ ಸತ್ಯನಿಷೇಧಿಗಳ ಬೇಡಿಕೆಯ ಮೇರೆಗೆ ಈ ಪವಾಡವು ಸಂಭವಿಸಿತ್ತು. ಚಂದ್ರ ಇಬ್ಭಾಗವಾಗಿ ಅದರ ಎರಡು ಭಾಗಗಳನ್ನು ಜನರು ಹಿರಾ ಬೆಟ್ಟದ ಎರಡು ಬದಿಗಳಲ್ಲಿ ಕಂಡರು.

وَإِن يَرَوۡاْ ءَايَةٗ يُعۡرِضُواْ وَيَقُولُواْ سِحۡرٞ مُّسۡتَمِرّٞ

ಅವರು ಯಾವುದೇ ದೃಷ್ಟಾಂತವನ್ನು ನೋಡಿದರೂ ವಿಮುಖರಾಗುತ್ತಾರೆ ಮತ್ತು “ಇದು ಹಿಂದಿನಿಂದಲೇ ನಡೆದು ಬರುತ್ತಿರುವ ಮಾಟಗಾರಿಕೆ” ಎಂದು ಹೇಳುತ್ತಾರೆ.

وَكَذَّبُواْ وَٱتَّبَعُوٓاْ أَهۡوَآءَهُمۡۚ وَكُلُّ أَمۡرٖ مُّسۡتَقِرّٞ

ಅವರು ನಿಷೇಧಿಸಿದರು ಮತ್ತು ತಮ್ಮ ಸ್ವೇಚ್ಛೆಗಳನ್ನು ಹಿಂಬಾಲಿಸಿದರು. ಎಲ್ಲಾ ವಿಷಯಗಳಿಗೂ ಒಂದು ನಿಶ್ಚಿತ ಸಮಯವನ್ನು ನಿರ್ಣಯಿಸಲಾಗಿದೆ.

وَلَقَدۡ جَآءَهُم مِّنَ ٱلۡأَنۢبَآءِ مَا فِيهِ مُزۡدَجَرٌ

ನಿಶ್ಚಯವಾಗಿಯೂ ಅವರ ಬಳಿಗೆ ಗದರಿಕೆಯ (ಉಪದೇಶವಿರುವ) ಸಮಾಚಾರಗಳು ಬಂದಿವೆ.

حِكۡمَةُۢ بَٰلِغَةٞۖ فَمَا تُغۡنِ ٱلنُّذُرُ

ಪೂರ್ಣರೂಪದ ವಿವೇಕಯುಕ್ತ ಮಾತುಗಳು. ಆದರೂ ಆ ಮುನ್ನೆಚ್ಚರಿಕೆಗಳು ಪ್ರಯೋಜನ ನೀಡಲಿಲ್ಲ.