Skip to content
الأعرَاف /

ಆಯತ್ 157

7 : 157

ಆಯತ್ 157 of الأعرَاف (7 : 157). This page carries the verse in the Uthmani script with a translation of its meaning, at a stable URL that can be cited on its own.

الأعرَاف ಆಯತ್‌ಗಳು 206
ಸೂರ · الأعرَاف
ಕನ್ನಡ · Hamza
7 : 157

ٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَٰٓئِكَ هُمُ ٱلۡمُفۡلِحُونَ

ಅವರು ಯಾರೆಂದರೆ, ತಮ್ಮ ಬಳಿಯಿರುವ ತೌರಾತ್‍ ಮತ್ತು ಇಂಜೀಲ್‍ನಲ್ಲಿ ಉಲ್ಲೇಖವಿರುವುದಾಗಿ ಕಾಣುವ ಅನಕ್ಷರಸ್ಥ ಪ್ರವಾದಿಯಾದ ಸಂದೇಶವಾಹಕರನ್ನು (ಪ್ರವಾದಿ ಮುಹಮ್ಮದರನ್ನು) ಅನುಸರಿಸುವವರು. ಆ ಪ್ರವಾದಿ ಅವರಿಗೆ ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ. ಅವರಿಗೆ ಉತ್ತಮ ವಸ್ತುಗಳನ್ನು ಅನುಮತಿಸುತ್ತಾರೆ ಮತ್ತು ಕೆಟ್ಟ ವಸ್ತುಗಳನ್ನು ನಿಷೇಧಿಸುತ್ತಾರೆ. ಅವರ ಭಾರವನ್ನು ಕೆಳಗಿಳಿಸಿ ಅವರ ಮೇಲೆ ಹೊರಿಸಲಾಗಿದ್ದ ಸಂಕೋಲೆಗಳನ್ನು ಕಳಚುತ್ತಾರೆ. ಆ ಪ್ರವಾದಿಯಲ್ಲಿ ವಿಶ್ವಾಸವಿಡುವವರು, ಅವರನ್ನು ಬೆಂಬಲಿಸುವವರು, ಸಹಾಯ ಮಾಡುವವರು ಮತ್ತು ಅವರೊಂದಿಗೆ ಅವತೀರ್ಣವಾದ ಬೆಳಕನ್ನು ಅನುಸರಿಸುವವರು ಯಾರೋ—ಅವರೇ ಯಶಸ್ವಿಯಾದವರು.