8 : 47
وَلَا تَكُونُواْ كَٱلَّذِينَ خَرَجُواْ مِن دِيَٰرِهِم بَطَرٗا وَرِئَآءَ ٱلنَّاسِ وَيَصُدُّونَ عَن سَبِيلِ ٱللَّهِۚ وَٱللَّهُ بِمَا يَعۡمَلُونَ مُحِيطٞ
ದರ್ಪದಿಂದ ಜನರ ಮುಂದೆ ಪ್ರದರ್ಶನ ಮಾಡುತ್ತಾ ಮತ್ತು ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದಕ್ಕಾಗಿ ತಮ್ಮ ಮನೆಗಳಿಂದ ಹೊರಟವರಂತೆ ನೀವಾಗಬೇಡಿ. ಅವರು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.
Explanation & meanings · 1
- ಮಕ್ಕಾದ ಸತ್ಯನಿಷೇಧಿಗಳು ತಮ್ಮ ವ್ಯಾಪಾರ ತಂಡವನ್ನು ಕಾಪಾಡುವುದಕ್ಕಾಗಿ ಮತ್ತು ಮುಸಲ್ಮಾನರನ್ನು ನಿರ್ನಾಮ ಮಾಡುವುದಕ್ಕಾಗಿ ಮಕ್ಕಾದಿಂದ ಹೊರಟ ಸ್ಥಿತಿಯನ್ನು ಇಲ್ಲಿ ವಿವರಿಸಲಾಗಿದೆ.